ಮೃತ ಮಹಮದ್ ಅಸ್ಫಾನ್ ಫೋಟೋ ಹಿಡಿದ ಕುಟುಂಬಸ್ಥರು 
ವಿದೇಶ

ರಷ್ಯಾ-ಉಕ್ರೇನ್ ಯುದ್ಧದಲ್ಲಿ 2ನೇ ಭಾರತೀಯ ಸಾವು, ವಂಚನೆಗೊಳಗಾಗಿ 'Wagner Army' ಸೇರಿದ್ದ ತೆಲಂಗಾಣ ಯುವಕ!

ರಷ್ಯಾ-ಉಕ್ರೇನ್ (Russia-Ukraine War) ಯುದ್ಧದಲ್ಲಿ ಮತ್ತೋರ್ವ ಭಾರತೀಯ (Indian Death) ಸಾವನ್ನಪ್ಪಿದ್ದು, ತೆಲಂಗಾಣ ಮೂಲದ ಮಹಮದ್ ಅಸ್ಫಾನ್ (Mohammed Asfan) ಉಕ್ರೇನ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ರಷ್ಯಾ-ಉಕ್ರೇನ್ (Russia-Ukraine War) ಯುದ್ಧದಲ್ಲಿ ಮತ್ತೋರ್ವ ಭಾರತೀಯ (Indian Death) ಸಾವನ್ನಪ್ಪಿದ್ದು, ತೆಲಂಗಾಣ ಮೂಲದ ಮಹಮದ್ ಅಸ್ಫಾನ್ (Mohammed Asfan) ಉಕ್ರೇನ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಸ, ಉದ್ಯೋಗ ಅರಸಿ ರಷ್ಯಾಗೆ (Russia) ತೆರಳಿರುವ ಭಾರತದ ಯುವಕರನ್ನು ಅಲ್ಲಿನ ಅಧಿಕಾರಿಗಳು ಬಲವಂತವಾಗಿ ಸೇನೆಗೆ ಸೇರಿಸಿಕೊಳ್ಳುತ್ತಿದ್ದು, ಇದರಿಂದ ಭಾರತದ ಯುವಕರು ಪ್ರಾಣ ಕಳೆದಕೊಳ್ಳುವಂತಾಗಿದೆ. ಇದೇ ರೀತಿ ತೆಲಂಗಾಣದ ಮೊಹಮ್ಮದ್‌ ಅಸ್ಫಾನ್‌ (30 ವರ್ಷ) ಎಂಬ ಯುವಕ ಉದ್ಯೋಗ ಅರಸಿ ರಷ್ಯಾ ತೆರಳಿದ್ದರು. ಆದರೆ, ಅಲ್ಲಿ ಅವರಿಗೆ ಉದ್ಯೋಗ ನೀಡುವುದಾಗಿ ಹೇಳಿ ರಷ್ಯಾ ಸೇನೆಯ ವ್ಯಾಗ್ನರ್ ಗ್ರೂಪ್ ಗೆ ಸೇರಿಸಿ ಮೋಸ ಮಾಡಲಾಗಿತ್ತು. ಇದೀಗ ಸಂಘರ್ಷದಲ್ಲಿ ಅವರು ಮೃತಪಟ್ಟಿದ್ದಾರೆ.

ಮೊಹಮ್ಮದ್‌ ಅಸ್ಫಾನ್‌ ಸಾವಿನ ಕುರಿತು ರಷ್ಯಾದಲ್ಲಿರುವ ಭಾರತದ ರಾಯಭಾರಿ ಕಚೇರಿಯೇ ಮಾಹಿತಿ ನೀಡಿದ್ದು, ಈತನು ಕೂಡ ರಷ್ಯಾ ಅಧಿಕಾರಿಗಳ ಬಲವಂತದಿಂದ ಸೇನೆ ಸೇರಿದ್ದ ಎಂದು ತಿಳಿದುಬಂದಿದೆ.

“ಭಾರತದ ಮೊಹಮ್ಮದ್‌ ಅಸ್ಫಾನ್‌ ಅವರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರಷ್ಯಾದ ಅಧಿಕಾರಿಗಳು ಹಾಗೂ ಮೊಹಮ್ಮದ್‌ ಅಸ್ಫಾನ್‌ ಅವರ ಕುಟುಂಬಸ್ಥರ ಜತೆ ಸಂಪರ್ಕದಲ್ಲಿದ್ದೇವೆ. ಮೊಹಮ್ಮದ್‌ ಅಸ್ಫಾನ್‌ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ” ಎಂದು ರಾಯಭಾರಿ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮನವಿ ಮಾಡಿದ್ದ ಕುಟುಂಬ

ಕೆಲ ದಿನಗಳ ಹಿಂದಷ್ಟೇ ರಷ್ಯಾದಲ್ಲಿ ಮೊಹಮ್ಮದ್‌ ಅಸ್ಫಾನ್‌ ಸಂಕಷ್ಟಕ್ಕೆ ಸಿಲುಕಿರುವ ಕುರಿತು ಆತನ ಕುಟುಂಬಸ್ಥರು ರಕ್ಷಣೆಗಾಗಿ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದರು. ಕೆಲಸ ಮಾಡಲೆಂದು ರಷ್ಯಾಗೆ ತೆರಳಿದ ಮೊಹಮ್ಮದ್‌ ಅಸ್ಫಾನ್‌ನನ್ನು ಬಲವಂತವಾಗಿ ಸೇನೆಗೆ ಸೇರಿಸಲಾಗಿದೆ. ಆತನು ಸಂಕಷ್ಟಕ್ಕೆ ಸಿಲುಕಿದ್ದು, ದಯಮಾಡಿ ರಕ್ಷಿಸಿ ಎಂದು ಕುಟುಂಬಸ್ಥರು ಕೋರಿದ್ದರು. ಭಾರತದ ವಿದೇಶಾಂಗ ಸಚಿವಾಲಯವೂ ಭಾರತೀಯರ ರಕ್ಷಣೆಯ ಭರವಸೆ ನೀಡಿತ್ತು. ಇದಕ್ಕೂ ಮೊದಲೇ ಮೊಹಮ್ಮದ್‌ ಅಸ್ಫಾನ್‌ ಯುದ್ಧದಲ್ಲಿ ಬಲಿಯಾಗಿದ್ದಾನೆ.

2ನೇ ಭಾರತೀಯನ ಸಾವು

ಅಸ್ಫಾನ್ ಸಾವು ರಷ್ಯಾದಲ್ಲಿ ಸಂಭವಿಸಿದ 2ನೇ ಭಾರತೀಯನ ಸಾವಾಗಿದೆ. ರಷ್ಯಾದಲ್ಲಿ ಉಕ್ರೇನ್‌ ಮಾಡಿದ ಡ್ರೋನ್‌ ದಾಳಿಯಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರತ ಮೂಲದ ಯುವಕನೊಬ್ಬ ಮೃತಪಟ್ಟಿದ್ದ. ರಷ್ಯಾ ಹಾಗೂ ಉಕ್ರೇನ್‌ ಗಡಿಯಲ್ಲಿ ನಡೆದ ಈ ದಾಳಿಯಲ್ಲಿ ಭಾರತದ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೃತನನ್ನು ಗುಜರಾತ್‌ನ ಸೂರತ್‌ ಜಿಲ್ಲೆಯ ಹೇಮಿಲ್‌ ಅಶ್ವಿನ್‌ಭಾಯಿ ಮಂಗುಕಿಯಾ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯ ಸಹಾಯಕನಾಗಿ 2023ರ ಡಿಸೆಂಬರ್‌ನಲ್ಲಿ ಈತ ಸೇರ್ಪಡೆಯಾಗಿದ್ದ. ಈತನು ಸೇನೆಯ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ರಷ್ಯಾದಲ್ಲಿ ನಿಗದಿತ ಗುರಿಗಳ ಮೇಲೆ ಉಕ್ರೇನ್‌ ವಾಯುದಾಳಿ ನಡೆಸಿದೆ. ದಾಳಿಯಲ್ಲಿ ಭಾರತದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT