ಭಾರತೀಯ ಮೂಲದ ಮೂವರು ಸಾವು PTI
ವಿದೇಶ

ಕೆನಡಾ: ಅಗ್ನಿ ಅವಘಡದಲ್ಲಿ ಭಾರತೀಯ ಮೂಲದ ಮೂವರು ದುರ್ಮರಣ!

ಕಳೆದ ವಾರ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ 'ಅನುಮಾನಾಸ್ಪದ' ಮನೆ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಭಾರತೀಯ ಮೂಲದ ದಂಪತಿಗಳು ಮತ್ತು ಅವರ ಮಗಳು ಎಂದು ಗುರುತಿಸಲಾಗಿದ್ದು ಈ ಬಗ್ಗೆ ಇಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಒಟ್ಟಾವಾ: ಕಳೆದ ವಾರ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ 'ಅನುಮಾನಾಸ್ಪದ' ಮನೆ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಭಾರತೀಯ ಮೂಲದ ದಂಪತಿಗಳು ಮತ್ತು ಅವರ ಮಗಳು ಎಂದು ಗುರುತಿಸಲಾಗಿದ್ದು ಈ ಬಗ್ಗೆ ಇಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾರ್ಚ್ 7ರಂದು ಬ್ರಾಂಪ್ಟನ್‌ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿ ಅನುಮಾನಾಸ್ಪದ ಸಂದರ್ಭಗಳಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಪೀಲ್ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಕಿ ನಂದಿಸಿದ ನಂತರ ಪೊಲೀಸರು ಮನೆಯಲ್ಲಿ ಹುಡುಕಾಟ ನಡೆಸಿದ್ದಾಗ ಮಾನವ ಅವಶೇಷಗಳು ಪತ್ತೆಯಾಗಿತ್ತು. ಆದರೆ ಆ ಸಮಯದಲ್ಲಿ ಸತ್ತವರ ಗುರುತು ಮತ್ತು ಸಂಖ್ಯೆ ಪತ್ತೆಯಾಗಿರಲಿಲ್ಲ.

ಶುಕ್ರವಾರ ಮೃತಪಟ್ಟವರನ್ನು ಭಾರತೀಯ ಮೂಲದ ರಾಜೀವ್ ವಾರಿಕು (51), ಅವರ ಪತ್ನಿ ಶಿಲ್ಪಾ ಕೋಥಾ (47) ಮತ್ತು ಮಗಳು ಮೆಹಕ್ (16) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ