ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ 
ವಿದೇಶ

ಭಾರತದ ಜೊತೆ ವ್ಯಾಪಾರ ಸಂಬಂಧ ಪುನಃಸ್ಥಾಪನೆಗೆ ಗಂಭೀರ ಪ್ರಯತ್ನ: ಪಾಕ್ ಸಚಿವ

ಭಾರತದೊಂದಿಗೆ ವ್ಯಾಪಾರ ಸಂಬಂಧಗಳನ್ನು ಪುನರುಜ್ಜೀವನಗೊಳಿಸುವುದನ್ನು ಪಾಕಿಸ್ತಾನ 'ಗಂಭೀರವಾಗಿ' ಪರಿಗಣಿಸುತ್ತಿದೆ ಎಂದು ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ ಹೇಳಿದ್ದಾರೆ.

ಭಾರತದೊಂದಿಗೆ ವ್ಯಾಪಾರ ಸಂಬಂಧಗಳನ್ನು ಪುನರುಜ್ಜೀವನಗೊಳಿಸುವುದನ್ನು ಪಾಕಿಸ್ತಾನ 'ಗಂಭೀರವಾಗಿ' ಪರಿಗಣಿಸುತ್ತಿದೆ ಎಂದು ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ ಹೇಳಿದ್ದಾರೆ.

ಸಚಿವರ ಈ ಹೇಳಿಕೆ ನೆರೆಯ ದೇಶದೊಂದಿಗಿನ ರಾಜತಾಂತ್ರಿಕ ನಿಲುವಿನಲ್ಲಿ ಸಂಭವನೀಯ ಬದಲಾವಣೆಯನ್ನು ಸೂಚಿಸುತ್ತದೆ. 2019ರ ಆಗಸ್ಟ್ ನಿಂದ ಭಾರತದೊಂದಿಗೆ ಪಾಕಿಸ್ತಾನದ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಲಾಗಿದೆ.

ಬ್ರಸೆಲ್ಸ್‌ನಲ್ಲಿ ನಡೆದ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಲಂಡನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗದು ಕೊರತೆಯನ್ನು ಎದುರಿಸುತ್ತಿರುವ ತಮ್ಮ ದೇಶದ ವ್ಯಾಪಾರ ಸಮುದಾಯವು ಭಾರತದೊಂದಿಗೆ ವ್ಯಾಪಾರ ಚಟುವಟಿಕೆಗಳನ್ನು ಪುನರಾರಂಭಿಸಲು ಉತ್ಸುಕವಾಗಿದೆ. ಪಾಕಿಸ್ತಾನದ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸಲು ಬಯಸುತ್ತಾರೆ ಎಂದು ಅವರು ಹೇಳಿದರು.

ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತ್ತು. ಭಾರತದ ಈ ನಡೆಯನ್ನು ವಿರೋಧಿಸಿದ್ದ ಪಾಕಿಸ್ತಾನವು ಭಾರತದೊಂದಿಗೆ ತನ್ನ ರಾಜತಾಂತ್ರಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಿತ್ತು.

ಆದರೆ, ಉಭಯ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸುವ ಜವಾಬ್ದಾರಿ ಭಾರತದ ಮೇಲಿದೆ ಎಂದು ಪಾಕಿಸ್ತಾನ ನಿರಂತರವಾಗಿ ಹೇಳುತ್ತಿದೆ. ಭಾರತದೊಂದಿಗೆ ಮಾತುಕತೆ ಆರಂಭಿಸಲು ಪೂರ್ವ ಷರತ್ತಾಗಿ ಕಾಶ್ಮೀರದಲ್ಲಿ ತನ್ನ 'ಏಕಪಕ್ಷೀಯ' ಕ್ರಮಗಳನ್ನು ಭಾರತ ಹಿಂಪಡೆಯಬೇಕು ಎಂದು ಪಾಕಿಸ್ತಾನ ಹೇಳಿದೆ. ಆದಾಗ್ಯೂ, ಭಾರತವು ಈ ಸಲಹೆಯನ್ನು ತಿರಸ್ಕರಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT