ಗೋಲ್ಡಿ ಬ್ರಾರ್ 
ವಿದೇಶ

ಶೂಟೌಟ್ ನಲ್ಲಿ ಗೋಲ್ಡಿ ಬ್ರಾರ್ ಸಾವನ್ನಪ್ಪಿಲ್ಲ: ಅಮೆರಿಕ ಪೊಲೀಸರಿಂದ ಮಾಹಿತಿ

ಫೇರ್‌ಮಾಂಟ್ ಮತ್ತು ಹಾಲ್ಟ್ ಅವೆನ್ಯೂಗಳಲ್ಲಿ ನಡೆದ ಶೂಟೌಟ್ ನಲ್ಲಿ ಹತ್ಯೆಯಾದ ವ್ಯಕ್ತಿಯನ್ನು 37 ವರ್ಷದ ಕ್ಸೇವಿಯರ್ ಗ್ಲಾಡ್ನಿ ಎಂದು ಫ್ರೆಸ್ನೋ ಪೊಲೀಸರು ಬುಧವಾರ ಗುರುತಿಸಿದ್ದಾರೆ.

ಫ್ರೆಸ್ನೋ: ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಫ್ರೆಸ್ನೋ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕೆನಡಾ ಮೂಲದ ಭಯೋತ್ಪಾದಕ ಗೋಲ್ಡಿ ಬ್ರಾರ್ ಸಾವನ್ನಪ್ಪಿದ್ದಾರೆ ಎಂಬ ವರದಿಯನ್ನು ಅಮೆರಿಕ ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಫೇರ್‌ಮಾಂಟ್ ಮತ್ತು ಹಾಲ್ಟ್ ಅವೆನ್ಯೂಗಳಲ್ಲಿ ನಡೆದ ಶೂಟೌಟ್ ನಲ್ಲಿ ಹತ್ಯೆಯಾದ ವ್ಯಕ್ತಿಯನ್ನು 37 ವರ್ಷದ ಕ್ಸೇವಿಯರ್ ಗ್ಲಾಡ್ನಿ ಎಂದು ಫ್ರೆಸ್ನೋ ಪೊಲೀಸರು ಬುಧವಾರ ಗುರುತಿಸಿದ್ದಾರೆ.

ಭಾರತದಲ್ಲಿ ನಡೆದ ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದ ಪ್ರಕರಣಕ್ಕೂ ಈ ಘಟನೆಗೂ ಸಂಬಂಧವಿಲ್ಲ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ ಎಂದು ದಿ ಫ್ರೆಸ್ನೋ ಬಿ ಪತ್ರಿಕೆ ವರದಿ ಮಾಡಿದೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸಹವರ್ತಿ ಗೋಲ್ಡಿ ಬ್ರಾರ್ ನನ್ನು ಅಮೆರಿಕದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬುಧವಾರ ಭಾರತದ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಇದು ಸುಳ್ಳು ಸುದ್ದಿ ಎಂದು ಅಮೆರಿಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಗೋಲ್ಡಿ ಬ್ರಾರ್ ಸಾವನ್ನಪ್ಪಿದ್ದಾರೆ ಎಂಬ ಆನ್‌ಲೈನ್ ಸುದ್ದಿಯು ಸಂಪೂರ್ಣವಾಗಿ ನಿಜವಲ್ಲ ಎಂದು ನಾವು ಖಚಿತಪಡಿಸುತ್ತೇವೆ ಎಂದು ಫ್ರೆಸ್ನೊ ಪೊಲೀಸ್ ಲೆಫ್ಟಿನೆಂಟ್ ವಿಲಿಯಂ ಜೆ. ಡೂಲಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT