ಪ್ರವಾಹದಿಂದಾಗಿ ಹಾನಿಗೊಳಗಾಗಿರುವ ವಾಹನಗಳು. 
ವಿದೇಶ

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಸಾವೊಪೌಲೊ: ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಮನೆಗಳು, ರಸ್ತೆಗಳು ಮತ್ತು ಸೇತುವೆಗಳ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿವೆ.

ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಅಣೆಕಟ್ಟುಗಳ ಮೇಲಿನ ಹೊರೆ ಹೆಚ್ಚುತ್ತಿದೆ ಎಂಬ ವರದಿ ಬಂದಿದ್ದು, ಇದರಿಂದ ಅಣೆಕಟ್ಟು ಒಡೆದರೆ ಭಾರೀ ಮಟ್ಟದಲ್ಲಿ ಅನಾಹುತ ಎದುರಾಗಬಹುದು ಎಂಬ ಆತಂಕ ಕೆಲವು ನಗರಗಳಿಗೆ ಎದುರಾಗಿದೆ.

ಈ ನಡುವೆ ಬ್ರೆಜಿಲ್ ಗವರ್ನರ್ ಎಡ್ವರ್ಡೊ ಲೀಟ್ ಅವರು ಈ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ‘ನಮ್ಮ ಇತಿಹಾಸದಲ್ಲಿ ನಾವು ನೋಡಿದ ಅತ್ಯಂತ ಕೆಟ್ಟ ದುರಂತವನ್ನು ನಾವು ಎದುರಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಮತ್ತೊಂದೆಡೆ, ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು, ಪ್ರವಾಹ ಪೀಡಿತ ಪ್ರದೇಶದ ರಕ್ಷಣಾ ಕಾರ್ಯಾಚರಣೆಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ದಕ್ಷಿಣ ಬ್ರೆಝಿಲ್‍ನ ಸುಮಾರು 150 ನಗರಸಭೆಗಳಲ್ಲಿ ಪ್ರವಾಹದಿಂದ ಹಾನಿ ಸಂಭವಿಸಿದ್ದು, ಕನಿಷ್ಟ 10,000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ನದಿಗಳ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ,ಹಲವೆಡೆ ಭೂಕುಸಿತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT