ಗಗನಯಾತ್ರಿ ಸುನೀತಾ ವಿಲಿಯಮ್ಸ್‌ 
ವಿದೇಶ

3ನೇ ಬಾರಿಗೆ Sunita Williams ಬಾಹ್ಯಾಕಾಶಯಾನ!

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌(Sunita Williams) ಇದೀಗ ಮತ್ತೆ ಬಾಹ್ಯಾಕಾಶ (Astronaut)ಕ್ಕೆ ಹಾರಲು ಸಿದ್ದರಾಗಿದ್ದು, ನಾಳೆ ನಡೆಯಲಿರುವ ಉಡಾವಣೆಯಲ್ಲಿ ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಲಿದ್ದಾರೆ.

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌(Sunita Williams) ಇದೀಗ ಮತ್ತೆ ಬಾಹ್ಯಾಕಾಶ (Astronaut)ಕ್ಕೆ ಹಾರಲು ಸಿದ್ದರಾಗಿದ್ದು, ನಾಳೆ ನಡೆಯಲಿರುವ ಉಡಾವಣೆಯಲ್ಲಿ ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಲಿದ್ದಾರೆ.

ನಾಳೆ ಬೆಳಗ್ಗೆ 8.34 ಕ್ಕೆ ಕೆನೆಡಿ ಬಾಹ್ಯಕಾಶ ಕೇಂದ್ರ(Kennedy Space Center)ದಿಂದ ಅವರು ನೂತನವಾಗಿ ನಿರ್ಮಿಸಿರುವ ಬಾಹ್ಯಾಕಾಶ ನೌಕೆ(spacecraft)ಯಲ್ಲಿ ಗಗನಯಾತ್ರೆ ಕೈಗೊಳ್ಳಲಿದ್ದಾರೆ. ತಮ್ಮ ಮೂರನೇ ಬಾರಿಯ ಗಗನಯಾತ್ರೆ ಬಗ್ಗೆ ಪ್ರತಿಕ್ರಿಯಿಸಿರುವ ಸುನೀತಾ, ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗೆ ಕಾಲಿಟ್ಟಾಗ ಮತ್ತೆ ಮನೆಗೆ ಮರಳಿದ ಅನುಭವಾಗುತ್ತದೆ.

ಈ ಬಾರಿ ಹೊಸ ಬಾಹ್ಯಾಕಾಶ ನೌಕೆಯಲ್ಲಿ ತೆರಳುತ್ತಿರುವ ಬಗ್ಗೆ ಸ್ವಲ್ಪ ಅಂಜಿಕೆ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

ಮಹತ್ವದ ಅಧ್ಯಯನಕ್ಕಾಗಿ ಬಾಹ್ಯಾಕಾಶಕ್ಕೆ ಹಾರಲಿರುವ ಸುನೀತಾ ವಿಲಿಯಮ್ಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳುವ ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದಾರೆ.

ಮೂರನೇ ಬಾಹ್ಯಾಕಾಶ ಪಯಣ

ಸುನಿತಾ ವಿಲಿಯಮ್ಸ್ ಗೆ ಇದು ಮೂರನೇ ಬಾಹ್ಯಾಕಾಶ ಪಯಣವಾಗಿದ್ದು, ಈ ಹಿಂದೆ ಅವರು, ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಅಲ್ಲಿ ಕಳೆದಿದ್ದರು. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗನನ ಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದುವರೆಗೆ ಸುನಿತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಒಟ್ಟು 50 ಗಂಟೆ 40 ನಿಮಿಷ ಕಾಲ ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ.

ಭಾರತ ಮೂಲದ ಪೋಷಕರು

ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಮೋಸಾ ಪ್ರಿಯೆ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಮೋಸ ಸವಿಯುವ ಮಜವೇ ಬೇರೆ ಎಂದಿದ್ದಾರೆ.

ಬೋಯಿಂಗ್ ಸ್ಟಾರ್ಲೈನರ್ ಮೂಲಕ ಪಯಣ

ಅಂದಹಾಗೆ ಸುನಿತಾ ವಿಲಿಯಮ್ಸ್ ಮತ್ತು ಅವರ ತಂಡ ಬೋಯಿಂಗ್ ಸಂಸ್ಥೆಯ ಸ್ಟಾರ್ ಲೈನರ್ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಪಯಣ ಬೆಳೆಸುತ್ತಿದ್ದು, ಇದು ಈ ರಾಕೆಟ್ ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಪಯಣವಾಗಿದೆ. ಬೋಯಿಂಗ್‌ನ ಸ್ಟಾರ್‌ಲೈನರ್ ರಾಕೆಟ್ ಫ್ಲೋರಿಡಾದ ಕೇಪ್ ಕ್ಯಾನವೆರಲ್‌ ಉಡಾವಣಾ ಕೇಂದ್ರದಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದೆ.

ಈ ಸ್ಟಾರ್‌ಲೈನರ್ ನಾಳೆ ಬೆಳಗ್ಗೆ ಭಾರತೀಯ ಕಾಲಮಾನ ಬೆಳಗ್ಗೆ 8 ಗಂಟೆ 4 ನಿಮಿಷಕ್ಕೆ ಸುನಿತಾ ವಿಲಿಯಮ್ಸ್ ಮಾತ್ರವಲ್ಲದೇ ಮತ್ತು ಮತ್ತೋರ್ವ ಗಗನ ಯಾತ್ರಿ ಬುಚ್ ವಿಲ್ಮೋರ್ ಅವರನ್ನೂ ಕೂಡ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಒಯ್ಯುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT