ಬ್ರೆಜಿಲ್ ಪ್ರವಾಹ 
ವಿದೇಶ

ಭಾರೀ ಪ್ರವಾಹಕ್ಕೆ ಬ್ರೆಜಿಲ್‌ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ

ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಬ್ರೆಜಿಲ್:‌ ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಪ್ರವಾಹದ ಪರಿಣಾಮ ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ, ಮನೆ-ವಸ್ತುಗಳನ್ನು ಕಳೆದುಕೊಂಡವರು ನೀರು ಹಾಗೂ ಆಹಾರಕ್ಕಾಗಿ ಸಂಕಷ್ಟ ಪಡುತ್ತಿದ್ದಾರೆ.

ಇನ್ನೂ ಹಲವು ಜನರು ಪ್ರವಾಹ ಪೀಡಿತ ಪ್ರದೇಶದಲ್ಲಿಯೇ ಉಳಿದ್ದು, ದೋಣಿ ಹಾಗೂ ಹೆಲಿಕಾಪ್ಟರ್ ಗಳ ಮೂಲಕ ಸ್ಥಳಾಂತರಗೊಳ್ಳಲು ಕಾಯುತ್ತಿದ್ದಾರೆ. ಪ್ರವಾಹದ ಪರಿಣಾಮ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯುಂಟಾಗಿದ್ದು, ಆಪತ್ತಿನಲ್ಲಿ ಸಿಲುಕಿದವರನ್ನು ಸಣ್ಣ ದೋಣಿಗಳ ಮೂಲಕ ರಕ್ಷಿಸಬೇಕಾಗಿದೆ.

ಈ ನಡುವೆ ಪ್ರವಾಹದ ಪರಿಣಾಮ ಈ ವರೆಗೂ 90 ಮಂದಿ ಸಾವನ್ನಪ್ಪಿದ್ದಾರೆಂದು ಅದಿಕಾರಿಗಳು ಮಾಹಿತಿ ನೀಡಿದ್ದು, 131 ಮಂದಿ ಇನ್ನೂ ಪತ್ತೆಯಾಗಿಲ್ಲ. 1,55,000 ಮಂದಿ ನಿರಾಶ್ರಿತರಾಗಿದ್ದಾರೆಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ಪೋರ್ಟೊ ಅಲೆಗ್ರೇಯಿಂದ 17 ಕಿಲೋ ಮೀಟರ್‌ ದೂರದಲ್ಲಿರುವ ಎಲ್‌ ಡೊರಾಡೊ ಡೊ ಸುಲ್‌ ನಲ್ಲಿ ಜನರು ಆಹಾರಕ್ಕಾಗಿ ಹಾತೊರೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ ಮೂರು ದಿನಗಳಿಂದ ನಮಗೆ ಏನೂ ಆಹಾರ ಸಿಕ್ಕಿಲ್ಲ, ಕೇವಲ ಬ್ಲಾಂಕೆಟ್‌ ಮಾತ್ರ ಸಿಕ್ಕಿದ್ದು, ನನ್ನ ಕುಟುಂಬ ಸದಸ್ಯರು ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಯುವಕ ರಿಕಾರ್ಡೋ ಜ್ಯೂನಿಯರ್‌ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT