ಗುರುಪತ್‌ವಂತ್ ಸಿಂಗ್ ಪನ್ನುನ್‌ online desk
ವಿದೇಶ

ಪನ್ನುನ್ ಹತ್ಯೆ ಯತ್ನ ಆರೋಪ: ಭಾರತದ ಕೈವಾಡಕ್ಕೆ ಆಧಾರಗಳಿಲ್ಲ; ಮಿತ್ರನ ಬೆನ್ನಿಗೆ ನಿಂತ ರಷ್ಯಾ

ಸಿಖ್ ಪ್ರತ್ಯೇಕತಾವಾದಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಹತ್ಯೆ ಯತ್ನದ ಆರೋಪದಲ್ಲಿ ರಷ್ಯಾ ಭಾರತದ ಬೆನ್ನಿಗೆ ನಿಂತಿದೆ.

ಮಾಸ್ಕೋ: ಸಿಖ್ ಪ್ರತ್ಯೇಕತಾವಾದಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಹತ್ಯೆ ಯತ್ನದ ಆರೋಪದಲ್ಲಿ ರಷ್ಯಾ ಭಾರತದ ಬೆನ್ನಿಗೆ ನಿಂತಿದೆ.

ಅಮೇರಿಕಾ ಭಾರತದ ವಿರುದ್ಧ ಹೊರಿಸಿರುವ ಆರೋಪಗಳಿಗೆ ರಷ್ಯಾ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಅಮೇರಿಕಾ ಪನ್ನುನ್ ಪ್ರಕರಣದಲ್ಲಿ ಭಾರತೀಯರ ಕೈವಾಡವಿದೆ ಎಂಬ ಆರೋಪಗಳಿಗೆ ಈ ವರೆಗೂ ವಿಶ್ವಾಸಾರ್ಹವಾದ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ಹೇಳಿದ್ದಾರೆ.

ಈ ವಿಷಯದಲ್ಲಿ ಸಾಕ್ಷ್ಯಾಧಾರಗಳಿಲ್ಲದೇ ಊಹೆಗಳನ್ನು ಮಾಡುವುದು ಸ್ವೀಕಾರಾರ್ಹವಾದುದ್ದಲ್ಲ ಎಂದು ರಷ್ಯಾ ವಿದೇಶಾಂಗ ಸಚಿವಾಲಯದ ವಕ್ತಾರೆ, ಮಾರಿಯಾ ಜಖರೋವಾ ಹೇಳಿದ್ದಾರೆ.

ಯುಎಸ್ ರಾಷ್ಟ್ರೀಯ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ, ಹಾಗೆಯೇ ಭಾರತೀಯ ದೇಶದ ಅಭಿವೃದ್ಧಿಯ ಐತಿಹಾಸಿಕ ಸಂದರ್ಭವನ್ನು ಅರ್ಥಮಾಡಿಕೊಳ್ಳುವುದಿಲ್ಲ ಮತ್ತು ಅದು ಭಾರತವನ್ನು ಒಂದು ದೇಶವನ್ನಾಗಿ ಅಗೌರವಿಸುತ್ತದೆ ಎಂದು ಮಾರಿಯಾ ಜಖರೋವಾ ಅಭಿಪ್ರಾಯಪಟ್ಟಿದ್ದಾರೆ.

ಶತ್ರುಗಳ ವಿರುದ್ಧ ರಷ್ಯಾ ಹಾಗೂ ಸೌದಿ ಅರೇಬಿಯಾಗಳು ನಡೆಸಿದ ಕಾರ್ಯಾಚರಣೆ ಮಾದರಿಯಲ್ಲಿಯೇ ಭಾರತವೂ ಕಾರ್ಯಾಚರಣೆ ನಡೆಸುತ್ತಿದೆ ಎಂದು ವಾಷಿಂಗ್ ಟನ್ ಪೋಸ್ಟ್ ವರದಿ ಪ್ರಕಟಿಸಿದ್ದರ ಕುರಿತ ಪ್ರಶ್ನೆಗಳಿಗೆ ಮಾರಿಯಾ ಜಖರೋವಾ ಉತ್ತರಿಸಿದ್ದಾರೆ.

"ವಾಷಿಂಗ್ಟನ್ ಪೋಸ್ಟ್, 'ದಮನಕಾರಿ ಆಡಳಿತ' ಮತ್ತು ನೀವು ಉಲ್ಲೇಖಿಸಿದ ಎಲ್ಲವನ್ನೂ ವಾಷಿಂಗ್ಟನ್, DC ಗೆ ಸಂಬಂಧಿಸಿದಂತೆ ಬಳಸಬೇಕು. ದೇಶೀಯ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ವಾಷಿಂಗ್ಟನ್‌ಗಿಂತ ಹೆಚ್ಚು ದಮನಕಾರಿ ಆಡಳಿತವನ್ನು ಕಲ್ಪನೆ ಮಾಡಿಕೊಳ್ಳುವುದು ಕಷ್ಟ ಎಂದು ಅಮೇರಿಕಾಗೆ ಮಾರಿಯಾ ಜಖರೋವಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT