ಅನ್ವರುಲ್ ಅಜೀಂ ಅನಾರ್ 
ವಿದೇಶ

ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಭೀಕರ ಹತ್ಯೆ

ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಕೊಲ್ಕತ್ತಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಢಾಕಾ: ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಕೊಲ್ಕತ್ತಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ಬುಧವಾರ ಪ್ರಕಟಿಸಿದ್ದಾರೆ.

"ಭಾರತದಲ್ಲಿ ನಾಪತ್ತೆಯಾಗಿದ್ದ ಅವಾಮಿ ಲೀಗ್ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಕೋಲ್ಕತ್ತಾದ ಫ್ಲಾಟ್‌ನಲ್ಲಿ ಕೊಲೆ ಮಾಡಲಾಗಿದೆ" ಎಂದು ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಇದುವರೆಗೆ, ಕೊಲೆಯಲ್ಲಿ ಭಾಗಿಯಾಗಿರುವ ಎಲ್ಲಾ ಹಂತಕರು ಬಾಂಗ್ಲಾದೇಶೀಯರು ಎಂದು ನಮಗೆ ತಿಳಿದು ಬಂದಿದೆ. ಇದು ಯೋಜಿತ ಕೊಲೆ" ಎಂದು ಅವರು ಹೇಳಿದ್ದಾರೆ.

56 ವರ್ಷದ ಸಂಸದನ ಹತ್ಯೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಸಚಿವರು ಹೇಳಿರುವುದಾಗಿ ದಿ ಡೈಲಿ ಸ್ಟಾರ್ ವರದಿ ಮಾಡಿದೆ.

ಮೃತದೇಹ ಎಲ್ಲಿದೆ ಎಂದು ವಿಚಾರಿಸಿದಾಗ ಈ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದರು.

"ಕೊಲೆ ಹಿಂದಿನ ಉದ್ದೇಶದ ಬಗ್ಗೆ ನಾವು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ". ಭಾರತೀಯ ಪೊಲೀಸರು ಪ್ರಕರಣದ ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಎಂದು ಸಚಿವರು ಹೇಳಿದ್ದಾರೆ.

ಮೂರು ಬಾರಿ ಸಂಸದರಾಗಿದ್ದ ಅನ್ವರುಲ್ ಅಜೀಂ ಅನಾರ್ ಅವರು ಚಿಕಿತ್ಸೆ ಪಡೆಯಲು ಮೇ 12 ರಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದರು. ಮೇ 18 ರಂದು ಉತ್ತರ ಕೋಲ್ಕತ್ತಾದ ಬಾರಾನಗರ ಪೊಲೀಸ್ ಠಾಣೆಯಲ್ಲಿ ಸಂಸದನ ನಾಪತ್ತೆ ಕುರಿತು ಸಾಮಾನ್ಯ ಡೈರಿ ವರದಿಯಲ್ಲಿ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT