ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ 
ವಿದೇಶ

ಪಪುವಾ ನ್ಯೂ ಗಿನಿಯಾದಲ್ಲಿ ಭೂಕುಸಿತ: 2 ಸಾವಿರಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿ!

ಪಪುವಾ ನ್ಯೂಗಿನಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಪತ್ತು ಕೇಂದ್ರ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ಪೋರ್ಟ್ ಮೋರೆಸ್ಬಿ: ಪಪುವಾ ನ್ಯೂಗಿನಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಪತ್ತು ಕೇಂದ್ರ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ದ್ವೀಪರಾಷ್ಟ್ರದ ಉತ್ತರದಲ್ಲಿರುವ ಎಂಗಾ ಪ್ರಾಂತದ ಯಂಬಾಲಿ ಹಳ್ಳಿಯ ಬೆಟ್ಟಪ್ರದೇಶಗಳಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 3 ಗಂಟೆಗೆ ಭೂಕುಸಿತ ಸಂಭವಿಸಿದ್ದು ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲೂ ಅಪಾರ ಸಾವು-ನೋವು, ನಾಶ ನಷ್ಟ ಸಂಭವಿಸಿದೆ.

ಶೋಧ ಮತ್ತು ರಕ್ಷಣಾ ತಂಡದ ಕಾರ್ಯಾಚರಣೆಯಲ್ಲಿ ಮಣ್ಣಿನಡಿ ಸಮಾಧಿಯಾಗಿದ್ದ ಹಲವು ದೇಹಗಳನ್ನು ಮೇಲೆತ್ತಲಾಗಿದೆ. ಸುಮಾರು 150 ಮನೆಗಳು ಮಣ್ಣಿನಡಿ ಹೂತುಹೋಗಿರುವುದಾಗಿ ಅಂದಾಜಿಸಲಾಗಿದೆ. ಹಲವೆಡೆ ಇನ್ನೂ ಕುಸಿತ ಮುಂದುವರಿದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದ್ದು. ಸಾವು-ನೋವಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ವಲಸೆ ಏಜೆನ್ಸಿ ಅಧಿಕಾರಿ ಸೆರ್ಹಾನ್ ಅಕ್ಟೋಪ್ರಾಕ್ ಮಾಹಿತಿ ನೀಡಿದ್ದಾರೆ.

ಇದೊಂದು ಅಸಾಮಾನ್ಯ ಪ್ರಾಕೃತಿಕ ದುರಂತವಾಗಿದ್ದು 1 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಹಲವೆಡೆ ಕೃಷಿ ತೋಟಗಳು ರಾತ್ರಿ ಬೆಳಗಾಗುವುದರಲ್ಲಿ ಭೂಮಿಯ ಒಡಲನ್ನು ಸೇರಿದ್ದು ಅಪಾರ ನಷ್ಟ ಸಂಭವಿಸಿದೆ. ನೀರು ಪೂರೈಕೆ ವ್ಯವಸ್ಥೆಗೆ ಹಾನಿಯಾಗಿದ್ದು, ಹಲವೆಡೆ ಕುಡಿಯುವ ನೀರಿನ ಕೊರತೆ ಎದುರಾಗಿದೆ.

ಭೂಕುಸಿತದ ಸ್ಥಳದಿಂದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲೆಡೆ ಕಲ್ಲು, ಮಣ್ಣು, ಕುಸಿದು ಬಿದ್ದ ಮರಗಳು, ತ್ಯಾಜ್ಯಗಳು ರಾಶಿ ಬಿದ್ದಿರುವುದರಿಂದ ರಸ್ತೆ ಸಂಚಾರ ಬಹುತೇಕ ಮೊಟಕುಗೊಂಡಿರುವುದರಿಂದ ಸ್ಥಳಾಂತರ ಪ್ರಕ್ರಿಯೆ ಮತ್ತು ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ. ಪಪುವಾ ನ್ಯೂಗಿನಿಯಾದ ಅಭಿವೃದ್ಧಿ ಪಾಲುದಾರರಿಗೆ, ಇತರ ಅಂತರರಾಷ್ಟ್ರೀಯ ಸ್ನೇಹಿತರಿಗೆ ದೇಶದ ಪರಿಸ್ಥಿತಿಯ ಬಗ್ಗೆ ತಿಳಿಸಿ ಸಹಾಯ ಹಸ್ತ ಚಾಚುವಂತೆ ವಿಶ್ವಸಂಸ್ಥೆಯನ್ನು ಕೋರಿದ್ದಾರೆ.

ಭೂಕುಸಿತ ಉಂಟಾದ ಪ್ರದೇಶದಲ್ಲಿ ಸುಮಾರು 4,000 ಜನ ವಾಸಿಸುತ್ತಿದ್ದರು. ಈ ಪೈಕಿ 1,250 ಮಂದಿ ಆಶ್ರಯ ಕಳೆದುಕೊಂಡಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ದೇಶದ ಕೇರ್‌ ಇಂಟರ್‌ನ್ಯಾಷನಲ್‌ ಸಂಸ್ಥೆ‌ ನಿರ್ದೇಶಕ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಮನವಿ ಬೆನ್ನಲ್ಲೇ ಸಂಕಷ್ಟದಲ್ಲಿರುವ ಪಪುವಾ ನ್ಯೂಗಿನಿಯಾಗೆ ಸಹಾಯ ಮಾಡುವಂತೆ ಮಿತ್ರ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ ನೀಡಿದೆ.

ಪಪುವಾ ನ್ಯೂಗಿನಿಯಾವು ವಿಶ್ವದ ಅತ್ಯಂತ ತೇವವಾದ ಹವಾಮಾನವನ್ನು ಹೊಂದಿದ್ದು, ಹವಾಮಾನ ಬದಲಾವಣೆಯಿಂದಾಗಿ ಭೂಕುಸಿತದ ಅಪಾಯ ಮತ್ತಷ್ಟು ಉಲ್ಬಣಗೊಳ್ಳಬಹುದು ಎಂದು ಸಂಶೋಧನೆಯೊಂದು ಮಾಹಿತಿ ನೀಡಿದೆ.

ವಿಪತ್ತು ಸಂಭವಿಸಿ ಈಗಾಗಲೇ ಮೂರು ದಿನಗಳು ಮತ್ತು ಏಳು ಗಂಟೆಗಳು ಕಳೆದಿವೆ, ಶೀಘ್ರಗತಿಯಲ್ಲಿ ಜನರ ರಕ್ಷಣೆಗ ಅಗತ್ಯವಿರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಕ್ಟೋಪ್ರಾಕ್ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT