ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು online desk
ವಿದೇಶ

ಇಸ್ರೇಲ್ ಪ್ರಧಾನಿ ಹತ್ಯೆಗೆ ಮತ್ತೆ ಯತ್ನ: ನೆತನ್ಯಾಹು ನಿವಾಸದ ಮೇಲೆ ಬಾಂಬ್‌ ದಾಳಿ..!

ಈ ಸಂಬಂಧ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್‌, ಎಲ್ಲ ಮಿತಿಗಳನ್ನು ಮೀರಿದ ಕೃತ್ಯವಿದು. ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.

ನವದೆಹಲಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕಾಳಗ ಮತ್ತಷ್ಟು ತಾರಕ್ಕೇರಿದ್ದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಹಿಜ್ಬುಲ್ಲಾ ಮತ್ತೊಮ್ಮೆ ದಾಳಿ ನಡೆಸಿದೆ.

ಕೈಸ್ರಾದಲ್ಲಿರುವ ನೆತನ್ಯಾಹು ಅವರ ನಿವಾಸದ ಬಳಿ ಎರಡು ರಾಕೆಟ್‌ಗಳು ಬಿದ್ದಿದ್ದು, ದಾಳಿ ಸಮಯದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬವು ನಿವಾಸದಲ್ಲಿ ಇರಲಿಲ್ಲ. ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್‌, ಎಲ್ಲ ಮಿತಿಗಳನ್ನು ಮೀರಿದ ಕೃತ್ಯವಿದು. ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನೆತನ್ಯಾಹು ಅವರ ಹತ್ಯೆಗೆ ಯತ್ನಿಸುತ್ತಿರುವ ಇರಾನ್‌ ಹಾಗೂ ಅದರ ಬೆಂಬಲಿತ ಪಡೆಗಳು ಈ ಕೃತ್ಯವೆಸಗಿರಬಹುದು' ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇಸ್ರೇಲಿ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಇಂತಹ ಕೃತ್ಯ ಮುಂದುವರಿದರೆ ಸುಮ್ಮನಿರೋದಿಲ್ಲ ವಿರುದ್ಧ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರುಶಿನ್ ಬೆಟ್‌ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಘಟನೆಗೆ ಕಾರಣರಾದವರನ್ನು ತ್ವರಿತವಾಗಿ ತನಿಖೆ ಮಾಡುವ ಮತ್ತು ಅದಕ್ಕೆ ತಕ್ಕ ಪಾಠ ಕಲಿಸುವ ತುರ್ತು ಅಗತ್ಯವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ತಿಂಗಳು ಅಕ್ಟೋಬರ್ 19 ರಂದು ನೆತನ್ಯಾಹು ಅವರ ಮನೆಯ ಮೇಲೆ ಮೊದಲ ಬಾರಿಗೆ ದಾಳಿ ನಡೆಸಲಾಗಿತ್ತು, ಹಿಜ್ಬುಲ್ಲಾ ನಡೆಸಿದ ಈ ವಿಫಲ ದಾಳಿ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ