ಇಸ್ರೇಲ್ ವೈಮಾನಿಕ ದಾಳಿ 
ವಿದೇಶ

ಲೆಬನಾನ್ ಮೇಲೆ ದಾಳಿ: ಸೈನಿಕನ ಸಾವು ಖಚಿತಪಡಿಸಿದ ಇಸ್ರೇಲ್ ಸೇನೆ

"22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ" ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿದೆ.

ಟೆಲ್ ಅವೀವ್: ಲೆಬನಾನ್‌ನ ಉಗ್ರ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರುಲ್ಲಾಹ್ ಹತ್ಯೆ ಮಾಡಿದ ಬೆನ್ನಲ್ಲೇ ಲೆಬನಾನ್ ಮೇಲೆ ಭೂ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್, ತನ್ನ ಸೈನಿಕ ಹುತಾತ್ಮರಾಗಿರುವುದಾಗಿ ಬುಧವಾರ ಪ್ರಕಟಿಸಿದೆ.

ಇದರೊಂದಿಗೆ ಭೂ ಸೇನಾ ಕಾರ್ಯಾಚರಣೆಯಲ್ಲಿ ತನ್ನ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಇದು ಹೆಜ್ಬುಲ್ಲಾವನ್ನು ಗುರಿಯಾಗಿಸಿ ಗಡಿ ದಾಟಿ ಅದರ ಪಡೆಗಳ ಮೇಲೆ ನಡೆಸುತ್ತಿರುವ ದಾಳಿಯಲ್ಲಿ ಸಂಭವಿಸಿದ ಇಸ್ರೇಲ್ ಪಡೆಯ ಮೊದಲ ಸಾವು ಎಂದು ವರದಿಯಾಗಿದೆ.

"22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ" ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿದೆ.

ಲೆಬನಾನ್ ರಾಜಧಾನಿಯಲ್ಲಿ ಸೀಮಿತ ಮತ್ತು ಸ್ಥಳೀಯ ಭೂ ಆಕ್ರಮಣ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ಬೈರುತ್​ನ ದಕ್ಷಿಣ ಉಪನಗರ ವ್ಯಾಪ್ತಿಯಲ್ಲಿ ಇಸ್ರೇಲ್ ಬೃಹತ್ ಪ್ರಮಾಣದ ದಾಳಿಗಳನ್ನು ಆರಂಭಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಉತ್ತರ ಇಸ್ರೇಲ್​​ ಗಡಿಯಲ್ಲಿ ವಾಸಿಸುವ ಜನರಿಗೆ ನೇರವಾಗಿ ಅಪಾಯವನ್ನುಂಟು ಮಾಡುವಂತಹ ಗಡಿಯ ಹತ್ತಿರದ ಹಳ್ಳಿಗಳಲ್ಲಿರುವ ನೆಲೆಗಳನ್ನು ಗುರಿಯಾಗಿಸಿ ಭೂ ಆಕ್ರಮಣ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಇಸ್ರೇಲಿ ರಕ್ಷಣಾ ಪಡೆ(ಐಡಿಎಫ್) ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT