13 ಜನರನ್ನು ಕೊಂದ ಯುವತಿ 
ವಿದೇಶ

ಬಾಯ್ ಫ್ರೆಂಡ್ ಜೊತೆ ಮದುವೆಗೆ ವಿರೋಧ: ಊಟಕ್ಕೆ ವಿಷ ಬೆರೆಸಿ ಮನೆಯ 13 ಜನರನ್ನು ಕೊಂದ ಯುವತಿ!

ಖೈರಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಒಂದೇ ಕುಟುಂಬದ 13 ಮಂದಿ ಸಾವಿಗೀಡಾಗಿದ್ದರು. ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟು ಮಾಡಿತ್ತು. ತನಿಖೆ ಕೈಗೊಂಡ ಪೊಲೀಸರು ಕೊನೆಗೂ ಪ್ರಕರಣ ಭೇದಿಸುವಲ್ಲಿ ಯಶಸ್ವಿ

ಸಿಂಧ್ ಪ್ರಾಂತ್ಯ: ತಾನು ಮೆಚ್ಚಿದ ಹುಡುಗನೊಂದಿಗೆ ಮದುವೆ ಮಾಡಿಕೊಡಲು ಕುಟುಂಬಸ್ಥರು ಒಪ್ಪಂದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಊಟಕ್ಕೆ ವಿಷ ಬೆರೆಸಿದ್ದರಿಂದ 13 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಖೈರಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಒಂದೇ ಕುಟುಂಬದ 13 ಮಂದಿ ಸಾವಿಗೀಡಾಗಿದ್ದರು. ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟು ಮಾಡಿತ್ತು. ತನಿಖೆ ಕೈಗೊಂಡ ಪೊಲೀಸರು ಕೊನೆಗೂ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಯುವತಿಯನ್ನು ಬಂಧಿಸಿದ್ದಾರೆ.

ತಾನು ಇಷ್ಟ ಪಟ್ಟಿದ ಹುಡುಗನನ್ನು ಮದುವೆಯಾಗಲು ಮನೆಯವರು ಒಪ್ಪದ ಕಾರಣ ಕೋಪಗೊಂಡ ಯುವತಿ ಶಾಯಿಸ್ತಾ, ತನ್ನ ಪ್ರಿಯಕರನೊಂದಿಗೆ ಸೇರಿ ಸಂಚು ರೂಪಿಸಿದ್ದು, ಆಕೆಯ ಪೋಷಕರು ಸೇರಿದಂತೆ ಕುಟುಂಬ ಸದಸ್ಯರಿಗೆ ವಿಷವುಣಿಸಿ ಸಾಯಿಸಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.

ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದ ಎಲ್ಲಾ 13 ಸದಸ್ಯರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಅವರೆಲ್ಲರೂ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆ ಮಾಡಿದಾಗ ವಿಷಪೂರಿತ ಆಹಾರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ ಎಂದು ಖೈರ್‌ಪುರದ ಹಿರಿಯ ಪೊಲೀಸ್ ಅಧಿಕಾರಿ ಇನಾಯತ್ ಶಾ ಹೇಳಿದ್ದಾರೆ.

ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿದಾಗ ಮನೆಯಲ್ಲಿ ರೊಟ್ಟಿ ಮಾಡಲು ಬಳಸುವ ಗೋಧಿಗೆ ಮಗಳು ಮತ್ತು ಆಕೆಯ ಗೆಳೆಯ ವಿಷ ಹಾಕಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭಾನುವಾರ ಆಕೆಯನ್ನು ಬಂಧಿಸಿದ್ದಾರೆ.

ಎಷ್ಟೇ ಪ್ರಯತ್ನಪಟ್ಟರೂ ತನ್ನ ಬಾಯ್ ಫ್ರೆಂಡ್ ಜೊತೆಗೆ ಮದುವೆ ಮಾಡಿಕೊಡಲು ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದಾಗಿ ಆತನ ಪ್ರಿಯಕರನೊಂದಿಗೆ ಸೇರಿ ರೊಟ್ಟಿಗೆ ಬಳಸುವ ಗೋಧಿಯೊಂದಿಗೆ ವಿಷ ಬೆರೆಸಿ ಹತ್ಯೆ ಮಾಡಿರುವುದಾಗಿ ಯುವತಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಇನಾಯತ್ ಶಾ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!