ಸಂಗ್ರಹ ಚಿತ್ರ 
ವಿದೇಶ

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಆಕ್ರೋಶ: ರಾಷ್ಟ್ರಪತಿ ಭವನಕ್ಕೆ ನುಗ್ಗಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗುತ್ತಿದ್ದು ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಅವರನ್ನು ತಡೆದರು. ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಸಾಗಲು ಯತ್ನಿಸಿದ್ದು ಕೂಡಲೇ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ಅವರನ್ನು ತಡೆದಿದ್ದಾರೆ.

ಮಾಹಿತಿ ಪ್ರಕಾರ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ನಂತರ ಪ್ರತಿಭಟನಾಕಾರರು ಹಿಂದೆ ಸರಿದಿದರು. ಲಾಠಿ ಚಾರ್ಜ್ ನಿಂದಾಗಿ ಕೆಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಢಾಕಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಾಸ್ತವವಾಗಿ, ಇತ್ತೀಚೆಗೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಹೇಳಿಕೆ ನೀಡಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಅವರು ಹೇಳಿದ್ದರು. ಸರಳವಾಗಿ ಹೇಳುವುದಾದರೆ, ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರ ರಾಜೀನಾಮೆ ಪತ್ರ ನನ್ನ ಬಳಿ ಇಲ್ಲ ಎಂದು ಅವರು ಹೇಳಿದರು.

ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ಈ ಹೇಳಿಕೆಯ ನಂತರ, ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರದ ಸಾಂವಿಧಾನಿಕತೆಯ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದವು. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೀಡಿದ ಹೇಳಿಕೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್