ಪ್ರತ್ಯಕ್ಷ ದೃಶ್ಯ 
ವಿದೇಶ

ಸೆಂಟ್ರಲ್ ಜೈಲಿನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವು, 59 ಮಂದಿಗೆ ಗಾಯ!

ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ (DRC) ರಾಜಧಾನಿ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವನ್ನಪ್ಪಿದ್ದು 59 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ಪ್ರಕಟಿಸಿದೆ.

ಉಪಪ್ರಧಾನಿ ಮತ್ತು ಆಂತರಿಕ ಮತ್ತು ಭದ್ರತಾ ಸಚಿವ ಜಾಕ್ವೆಮನ್ ಶಬಾನಿ, ತಾತ್ಕಾಲಿಕ ಸಾವಿನ ಸಂಖ್ಯೆ 129ಕ್ಕೆ ತಲುಪಿದೆ. ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಕನಿಷ್ಠ 59 ದಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಸೋಮವಾರ ಮುಂಜಾನೆ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ಹಲವು ಗಂಟೆಗಳ ಕಾಲ ಗುಂಡಿನ ಸದ್ದು ಕೇಳಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಳೆದ ಜುಲೈನಲ್ಲಿ ಸಚಿವ ಕಾನ್‌ಸ್ಟೆಂಟ್ ಮುತಂಬಾ ಅವರು ಜನಸಂದಣಿಯನ್ನು ಕಡಿಮೆ ಮಾಡಲು ಮಕಾಲಾ ಸೆಂಟ್ರಲ್ ಜೈಲಿನಲ್ಲಿರುವ 1,284 ಕೈದಿಗಳನ್ನು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದರು.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ವರದಿಗಳ ಪ್ರಕಾರ, 1,500 ಕೈದಿಗಳ ಸಾಮರ್ಥ್ಯವನ್ನು ಹೊಂದಿದ್ದ ಜೈಲಿನಲ್ಲಿ 12,000ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರಲ್ಲಿ ಹೆಚ್ಚಿನವರು ವಿಚಾರಣಾಧೀನ ಕೈದಿಗಳಾಗಿದ್ದಾರೆ.

2017ರಲ್ಲಿ ಸಂಘಟನೆಯೊಂದು ಜೈಲಿನ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಕೈದಿಗಳು ಜೈಲಿನಿಂದ ತಪ್ಪಿಸಿಕೊಳ್ಳುವಂತೆ ಮಾಡಿತ್ತು. ಮಕಾಲಾ ಸೆಂಟ್ರಲ್ ಜೈಲಿನಲ್ಲಿ ಹಿಂದೆ ಹಲವು ಜೈಲಿನಿಂದ ಪರಾರಿಯಾದ ಪ್ರಕರಣಗಳು ನಡೆದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?