ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ 
ವಿದೇಶ

Kabul suicide bombing: ಕನಿಷ್ಠ 6 ಮಂದಿ ಸಾವು, ಹೊಣೆ ಹೊತ್ತ ISIS

ಕಾಬೂಲ್ ನ 6ನೇ ಭದ್ರತಾ ವಲಯದಲ್ಲಿ ಇಂದು ಮಧ್ಯಾಹ್ನ ಕ್ವಾಲಾ-ಎ-ಬಖ್ತಿಯಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.

ಕಾಬುಲ್: ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಕಾಬೂಲ್ ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ.

ಕಾಬೂಲ್ ನ 6ನೇ ಭದ್ರತಾ ವಲಯದಲ್ಲಿ ಇಂದು ಮಧ್ಯಾಹ್ನ ಕ್ವಾಲಾ-ಎ-ಬಖ್ತಿಯಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ದಾಳಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿ, 13 ಮಂದಿ ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸರು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದೇ ವಿಚಾರವಾಗಿ ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, "ಕಾಬೂಲ್‌ನಲ್ಲಿ ವ್ಯಕ್ತಿಯೊಬ್ಬ ನಡೆಸಿದ ಆತ್ಮಹತ್ಯಾ ದಾಳಿ ನಡೆದಿದ್ದು, ದುರದೃಷ್ಟವಶಾತ್, ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಹೊಣೆ ಹೊತ್ತ ISIS

ಇನ್ನು ದಾಳಿ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತಿದ್ದು, "ತಾಲಿಬಾನ್ ಜೈಲಿನಲ್ಲಿರುವ ಮುಸ್ಲಿಮರಿಗಾಗಿ ತಾನು ಈ ಸೇಡು ತೀರಿಸಿಕೊಂಡಿರುವುದಾಗಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್