ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ವಿದೇಶ

ಮೋದಿ ಅದ್ಭುತ ವ್ಯಕ್ತಿ, ಅವರನ್ನು ಮುಂದಿನ ವಾರ ಭೇಟಿ ಮಾಡುತ್ತೇನೆ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 21 ರಿಂದ 23 ರವರೆಗೆ ಯುಎಸ್‌ಗೆ ಭೇಟಿ ನೀಡಲಿದ್ದಾರೆ, ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಅಧ್ಯಕ್ಷ ಜೋ ಬೈಡನ್ ಅವರು ಆಯೋಜಿಸಿರುವ ಕ್ವಾಡ್ ಲೀಡರ್ಸ್ ಶೃಂಗಸಭೆಯೊಂದಿಗೆ ತಮ್ಮ ಅಮೆರಿಕ ಪ್ರವಾಸ ಪ್ರಾರಂಭಿಸಲಿದ್ದಾರೆ.

ವಾಷಿಂಗ್ಟನ್/ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಂದಿನ ವಾರ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲಿದ್ದೇನೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 21 ರಿಂದ 23 ರವರೆಗೆ ಯುಎಸ್‌ಗೆ ಭೇಟಿ ನೀಡಲಿದ್ದಾರೆ, ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಅಧ್ಯಕ್ಷ ಜೋ ಬೈಡನ್ ಅವರು ಆಯೋಜಿಸಿರುವ ಕ್ವಾಡ್ ಲೀಡರ್ಸ್ ಶೃಂಗಸಭೆಯೊಂದಿಗೆ ತಮ್ಮ ಅಮೆರಿಕ ಪ್ರವಾಸ ಪ್ರಾರಂಭಿಸಲಿದ್ದಾರೆ.

ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್‌ನ ಪ್ರಧಾನಿ ಕಿಶಿಡಾ ಫ್ಯೂಮಿಯೊ ಭಾಗವಹಿಸಲಿದ್ದಾರೆ.

ನಂತರ ಮೋದಿಯವರು ನ್ಯೂಯಾರ್ಕ್‌ಗೆ ಪ್ರಯಾಣಿಸಲಿದ್ದಾರೆ. ಸೆಪ್ಟೆಂಬರ್ 22 ರಂದು ಲಾಂಗ್ ಐಲ್ಯಾಂಡ್‌ನಲ್ಲಿ ಮೆಗಾ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಲಿರುವ ಭವಿಷ್ಯದ ಶೃಂಗಸಭೆಯ ಮಹತ್ವದ ಸಮಾರಂಭದಲ್ಲಿ ಅವರು ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಿನ್ನೆ ಮಿಚಿಗನ್‌ನ ಫ್ಲಿಂಟ್‌ನಲ್ಲಿ ನಡೆದ ಟೌನ್ ಹಾಲ್ ಸಭೆಯಲ್ಲಿ ಮಾತನಾಡಿದ ಟ್ರಂಪ್, ಮೋದಿ ಅವರು ಮುಂದಿನ ವಾರ ಅಮೆರಿಕ ಪ್ರವಾಸದಲ್ಲಿರುವಾಗ ಅವರನ್ನು ಭೇಟಿಯಾಗಲಿದ್ದೇನೆ, ಅವರೊಬ್ಬ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ.

ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುವಾಗ ವ್ಯಾಪಾರ ಮತ್ತು ಸುಂಕದ ಬಗ್ಗೆ ಮಾತನಾಡುತ್ತಿದ್ದ ವೇಳೆ ಈ ವಿಷಯ ತಿಳಿಸಿದ್ದಾರೆ.

ಇನ್ನೆರಡು ತಿಂಗಳಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT