ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆಯಾದ ಅನುರಾ ಡಿಸಾನಾಯಕೆ  
ವಿದೇಶ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಅನುರಾ ಡಿಸಾನಾಯಕೆ ವಿಜಯಿ ಎಂದು ಚುನಾವಣಾ ಆಯೋಗ ಘೋಷಣೆ

ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ 56 ವರ್ಷದ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJB) ಅಭ್ಯರ್ಥಿ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.

ಕೊಲಂಬೊ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ಡಿಸಾನಾಯಕೆ ಅವರನ್ನು ವಿಜಯಶಾಲಿ ಎಂದು ಚುನಾವಣಾ ಆಯೋಗ ಘೋಷಿಸಿದೆ.

ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ 56 ವರ್ಷದ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJBಯ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.

ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಮೊದಲ ಸುತ್ತಿನಲ್ಲೇ ಮತಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಿಸುವಲ್ಲಿ ವಿಫಲರಾದರು. ದಿಸಾನಾಯಕ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್‌ಪಿಪಿ ತಿಳಿಸಿದೆ.

ಇದಕ್ಕೂ ಮೊದಲು, ನಿನ್ನೆ ಶನಿವಾರ ನಡೆದ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಶೇಕಡಾ 50 ಕ್ಕಿಂತ ಹೆಚ್ಚು ಮತಗಳನ್ನು ಗಳಿಸದ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಮತ ಎಣಿಕೆಗೆ ಚುನಾವಣಾ ಆಯೋಗವು ಆದೇಶ ನೀಡಿತ್ತು.

ದಿಸಾನಾಯಕೆ ಅವರು ದೇಶದ 9ನೇ ಅಧ್ಯಕ್ಷರಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ