ನೇಪಾಳ ಪ್ರಧಾನಿ ಜೊತೆ ಪ್ರಧಾನಿ ಮೋದಿ  
ವಿದೇಶ

New York: ನೇಪಾಳ ಪ್ರಧಾನಿ, ಪ್ಯಾಲೆಸ್ತೀನ್ ಅಧ್ಯಕ್ಷರ ಭೇಟಿ ಮಾಡಿದ ಪ್ರಧಾನಿ ಮೋದಿ; UNGA ಸಭೆ

ಮೂರು ದಿನಗಳ ಅಮೇರಿಕಾ ಪ್ರವಾಸದ ಎರಡನೇ ದಿನ ಪ್ರಧಾನಿ ಮೋದಿಯವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದರು.

ನ್ಯೂಯಾರ್ಕ್: ನೇಪಾಳದ ಪ್ರಧಾನಿ ಕೆ ಪಿ ಶರ್ಮಾ ಒಲಿ ಮತ್ತು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಸೇರಿದಂತೆ ವಿಶ್ವ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯದ ವಿವಿಧ ಅಂಶಗಳನ್ನು ಚರ್ಚಿಸಿದ್ದಾರೆ. ಪ್ಯಾಲೆಸ್ತೀನ್ ಜನರಿಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಛರಿಸಿದರು.

ಮೂರು ದಿನಗಳ ಅಮೇರಿಕಾ ಪ್ರವಾಸದ ಎರಡನೇ ದಿನ ಪ್ರಧಾನಿ ಮೋದಿಯವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದರು.

ನ್ಯೂಯಾರ್ಕ್‌ನಲ್ಲಿ ಪ್ರಧಾನ ಮಂತ್ರಿ ಕೆಪಿ ಓಲಿ ಅವರೊಂದಿಗೆ ಫಲಪ್ರದ ಮಾತುಕತೆ ನಡೆದಿದೆ. ಭಾರತ-ನೇಪಾಳ ಸ್ನೇಹವು ತುಂಬಾ ದೃಢವಾಗಿದೆ. ನಮ್ಮ ಸಂಬಂಧಗಳಿಗೆ ಇನ್ನಷ್ಟು ವೇಗ ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ನಮ್ಮ ಮಾತುಕತೆಗಳು ಇಂಧನ, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ ಎಂದು ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79 ನೇ ಅಧಿವೇಶನದಲ್ಲಿ ಪಾಲ್ಗೊಳ್ಳಲು ಒಲಿ ಅವರು ತಮ್ಮ ಮೊದಲ ವಿದೇಶಿ ಭೇಟಿಯಲ್ಲಿ ಅಮೆರಿಕಾದಲ್ಲಿದೆ. ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅವರನ್ನು ಭೇಟಿ ಮಾಡಿದ ಮೋದಿ ಪ್ಯಾಲೆಸ್ತೀನ್ ಜನತೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು.

ಮೋದಿ ಕುವೈತ್‌ನ ಯುವರಾಜ ಶೇಖ್ ಸಬಾಹ್ ಖಾಲಿದ್ ಅಲ್ ಸಬಾಹ್ ಅವರನ್ನು ಭೇಟಿ ಮಾಡಿದರು. ಎರಡೂ ದೇಶಗಳ ಐತಿಹಾಸಿಕ ಸಂಬಂಧಗಳು ಮತ್ತು ಜನರಿಂದ ಜನರ ಸಂಪರ್ಕಗಳನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಭಾರತ-ಕುವೈತ್ ಬಾಂಧವ್ಯದಲ್ಲಿ ಹೊಸ ದಾಪುಗಾಲು: ಪ್ರಧಾನಮಂತ್ರಿಗಳು ಕುವೈತ್ ರಾಜ್ಯದ ಕ್ರೌನ್ ಪ್ರಿನ್ಸ್ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರನ್ನು ಭೇಟಿಯಾದರು. ದ್ವಿಪಕ್ಷೀಯ ಸಂಬಂಧಗಳು ಮತ್ತು ನಮ್ಮ ಐತಿಹಾಸಿಕ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಲಾಯಿತು.

ಅದಕ್ಕೆ ಹಿಂದಿನ ದಿನ ಮೋದಿ ಅವರು ದುಂಡುಮೇಜಿನ ಸಮ್ಮೇಳನದಲ್ಲಿ ಯುಎಸ್‌ನ ಉನ್ನತ ತಂತ್ರಜ್ಞಾನ ನಾಯಕರು ಮತ್ತು ಸಿಇಒಗಳೊಂದಿಗೆ ಸಂವಾದ ನಡೆಸಿದರು. ಅದಕ್ಕೂ ಮುನ್ನ ಅವರು ನ್ಯೂಯಾರ್ಕ್‌ನ ಲಾಂಗ್ ಐಲ್ಯಾಂಡ್‌ನಲ್ಲಿರುವ ತುಂಬಿದ ನಸ್ಸೌ ವೆಟರನ್ಸ್ ಕೊಲಿಜಿಯಂನಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT