ಝೆಲೆನ್ ಸ್ಕಿ ಭೇಟಿಯಾದ ಪ್ರಧಾನಿ ಮೋದಿ 
ವಿದೇಶ

ವಿಶ್ವಸಂಸ್ಥೆ: ಕಳೆದ ಮೂರು ತಿಂಗಳಲ್ಲಿ 3ನೇ ಬಾರಿಗೆ Zelenskyy ಜೊತೆ ಮೋದಿ ಮಾತುಕತೆ

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ನ್ಯೂಯಾರ್ಕ್: ವಿಶ್ವಸಂಸ್ಥೆ ಶೃಂಗಸಭೆಯ ವೇಳೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ ಭೇಟಿ ವೇಳೆ ಕೀವ್ ನಲ್ಲಿ, ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು , ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್ ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್ ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೆ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಉಕ್ರೇನ್ ಸಂಘರ್ಷಕ್ಕೆ ಶಾಶ್ವತ ಮತ್ತು ಶಾಂತಿಯುತ ಪರಿಹಾರಕ್ಕೆ ನೆರವಾಗಲು ಬೇಕಾದ ಎಲ್ಲ ನೆರವು ನೀಡಲು ಭಾರತ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ, ಸಂಘರ್ಷವನ್ನು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸ್ಪಷ್ಟ, ಸ್ಥಿರ ಮತ್ತು ರಚನಾತ್ಮಕ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಮತ್ತೊಂದೆಡೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಝೆಲೆನ್ ಸ್ಕಿ, ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ ಮೂರನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ .

ಈ ಮಧ್ಯೆ ರಷ್ಯಾ ತೈಲ ಕುರಿತು ಪ್ರಧಾನಿ ಮೋದಿ ಹಾಗೂ ಝೆಲೆನ್ಸ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಪಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT