ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ 
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ: ಭಾರತಕ್ಕೆ ಫ್ರಾನ್ಸ್‌, ಬ್ರಿಟನ್ ಬೆಂಬಲ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.

ನವದೆಹಲಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲಬಂದಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಿವೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.

ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯ ಸ್ಥಾನ ನೀಡುವ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸಿದ್ದ ಮಾತುಕತೆ ಕೊನೆಗೂ ಯಶಸ್ವಿಯಾಗಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಲು ಮುಂದಾಗಿದೆ.

ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯಸಭೆಯ 89ನೇ ಅಧಿವೇಶನದ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ಬ್ರಿಟನ್ ಪ್ರಧಾನಿ ಸ್ಟಾರ್ಮರ್, 'ಯುಎನ್‌ಎಸ್‌ಸಿ "ಹೆಚ್ಚು ಪ್ರಾತಿನಿಧಿಕ ಸಂಸ್ಥೆ" ಆಗಲು ಬದಲಾಗಬೇಕು ಎಂದು ಹೇಳಿದರು.

"ನಾವು ಭದ್ರತಾ ಮಂಡಳಿಯಲ್ಲಿ ಶಾಶ್ವತ ಆಫ್ರಿಕನ್ ಪ್ರಾತಿನಿಧ್ಯವನ್ನು ನೋಡಲು ಬಯಸುತ್ತೇವೆ. ಅಂತೆಯೇ ಬ್ರೆಜಿಲ್, ಭಾರತ, ಜಪಾನ್ ಮತ್ತು ಜರ್ಮನಿ ದೇಶಗಳನ್ನು ಶಾಶ್ವತ ಸದಸ್ಯರಾಗಿ ಆಯ್ಕೆ ಮಾಡಿ ಚುನಾಯಿತ ಸದಸ್ಯರಿಗೆ ಹೆಚ್ಚಿನ ಸ್ಥಾನಗಳನ್ನು ಸಹ ನೋಡಲು ಬಯಸುತ್ತೇವೆ" ಎಂದು ಸ್ಟಾರ್ಮರ್ ಹೇಳಿದರು.

ಇದೇ ವಾದವನ್ನು ಮುಂದಿಟ್ಟ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್, ‘ಫ್ರಾನ್ಸ್, ಭದ್ರತಾ ಮಂಡಳಿಯ ವಿಸ್ತರಣೆಯ ಪರವಾಗಿದೆ. ಜರ್ಮನಿ, ಜಪಾನ್‌, ಭಾರತ ಹಾಗೂ ಬ್ರೆಜಿಲ್‌ ಕಾಯಂ ಸದಸ್ಯತ್ವ ಪಡೆಯಬೇಕು’ ಎಂದು ಹೇಳಿದರು. ಅಲ್ಲದೇ ‘ಭದ್ರತಾ ಮಂಡಳಿಯ ಸುಧಾರಣೆಗಾಗಿ ಭಾರತವು ಪ್ರಯತ್ನಿಸುತ್ತಿದೆ. ಭದ್ರತಾ ಮಂಡಳಿಯ ಕಾಯಂ ಸದಸ್ಯನಾಗಲು ಭಾರತ ಅರ್ಹವಾಗಿದೆ.

1945ರಲ್ಲಿ ವಿಶ್ವಸಂಸ್ಥೆಯು ಸ್ಥಾಪನೆಯಾದಾಗಿನಿಂದ ಕೇವಲ 15 ರಾಷ್ಟ್ರಗಳು ಮಾತ್ರವೇ ಸದಸ್ಯತ್ವ ಪಡೆದಿವೆ. (5 ಕಾಯಂ ಮತ್ತು 10 ಕಾಯಂ ಅಲ್ಲದ ಸದಸ್ಯ ರಾಷ್ಟ್ರಗಳು) 21ನೇ ಶತಮಾನದಲ್ಲೂ ಇದೇ ರೀತಿ ಮುಂದುವರಿಯುವುದು ಸಮಂಜಸವಲ್ಲ. ಇದು ಸಮಕಾಲೀನ ಭೌಗೋಳಿಕ ಹಾಗೂ ರಾಜಕೀಯ ವಾಸ್ತವಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ಭಾರತ ಪ್ರತಿಪಾದಿಸುತ್ತಿದೆ’ ಎಂದರು.

‘ಭದ್ರತಾ ಮಂಡಳಿಯು ನಿರ್ಬಂಧಿಸಲ್ಪಟ್ಟಿದೆ. ನಾವು ವಿಶ್ವಸಂಸ್ಥೆಯನ್ನು ಹೆಚ್ಚು ಪರಿಣಾಮಕಾರಿ ಹಾಗೂ ಪ್ರಾತಿನಿಧಿಕವನ್ನಾಗಿ ಮಾಡಬೇಕು’ ಎಂದೂ ಅವರು ಪ್ರತಿಪಾದಿಸಿದರು.

ಪ್ರಸ್ತುತ, UNSC ಐದು ಖಾಯಂ ಸದಸ್ಯರು ಮತ್ತು 10 ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಇವುಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಿಂದ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಐದು ಖಾಯಂ ಸದಸ್ಯ ರಾಷ್ಟ್ರಗಳು ರಷ್ಯಾ, ಯುಕೆ, ಚೀನಾ, ಫ್ರಾನ್ಸ್ ಮತ್ತು ಅಮೆರಿಕ ದೇಶಗಳಾಗಿವೆ. ಇವುಗಳು ಯಾವುದೇ ವಸ್ತುನಿಷ್ಠ ನಿರ್ಣಯವನ್ನು ಮಂಡಿಸಲು ವೀಟೋ ಮಾಡುವ ಅಧಿಕಾರವನ್ನು ಹೊಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT