ಭೂತಾನ್ ಪ್ರಧಾನಿ ಶೆರಿಂಗ್‌ ಟೊಬಗೆ 
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಕಾಯಂ ಸದಸ್ಯತ್ವ: ಭಾರತಕ್ಕೆ ಭೂತಾನ್ ಬೆಂಬಲ!

ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾನ್ ಪ್ರಧಾನಿ ಶೆರಿಂಗ್‌ ಟೊಬಗೆ ಹೇಳಿದ್ದಾರೆ.

ನ್ಯೂಯಾರ್ಕ್‌: ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವಕ್ಕೆ ಪ್ರಯತ್ನಿಸುತ್ತಿರುವ ಭಾರತಕ್ಕೆ ಇದೀಗ ಭೂತಾನ್ ಕೂಡ ಬೆಂಬಲ ಘೋಷಣೆ ಮಾಡಿದೆ.

ಹೌದು... ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾನ್ ಪ್ರಧಾನಿ ಶೆರಿಂಗ್‌ ಟೊಬಗೆ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದ 79ನೇ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, 'ತೀರಾ ಹಿಂದುಳಿದ ದೇಶಗಳ (ಎಲ್‌ಡಿಸಿ) ಕೆಟಗರಿಯಿಂದ ಪ್ರಗತಿಯತ್ತ ಮುನ್ನಡೆಯಲು ಭೂತಾನ್‌ಗೆ ಭಾರತ ನೀಡಿದ ನೆರವು ಮತ್ತು ಸ್ನೇಹಕ್ಕಾಗಿ, ಟೊಬಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಶ್ವಸಂಸ್ಥೆಯು ಪ್ರಸ್ತುತ ಜಗತ್ತಿನ ವಾಸ್ತವಿಕ ಅಂಶಗಳನ್ನು ಪೂರೈಸುವಂತಿರಬೇಕು. ಭದ್ರತಾ ಮಂಡಳಿಯು ಗತಕಾಲದ ಅವೇಶಷವಾಗಿ ಉಳಿದಿದೆ. ಸದ್ಯದ ಭೌಗೋಳಿಕ ರಾಜಕೀಯ, ಆರ್ಥಿಕ ಚಿತ್ರಣ ಮತ್ತು ಸಾಮಾಜಿಕ ವಾಸ್ತವಾಂಶಗಳನ್ನು ಪ್ರತಿನಿಧಿಸುವಂತಹ ಮಂಡಳಿಯ ಅಗತ್ಯವಿದೆ' ಎಂದು ಪ್ರತಿಪಾದಿಸಿದ್ದಾರೆ.

ಅಂತೆಯೇ ಜಾಗತಿಕ ಶಾಂತಿಗೆ ಶ್ರಮಿಸುತ್ತಿರುವ ಜಪಾನ್‌ಗೂ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಸಿಗಬೇಕು ಎಂದು ಹೇಳಿದ್ದಾರೆ.

ಅಂತೆಯೇ ಹೆಚ್ಚು ಪರಿಣಾಮಕಾರಿಯನ್ನಾಗಿಸುವ ನಿಟ್ಟಿನಲ್ಲಿ 15 ರಾಷ್ಟ್ರಗಳನ್ನೊಳಗೊಂಡ ಭದ್ರತಾ ಮಂಡಳಿಯ ಸುಧಾರಣೆ ಹಾಗೂ ಭಾರತಕ್ಕೆ ಕಾಯಂ ಸದಸ್ಯತ್ವಕ್ಕಾಗಿ ಭೂತಾನ್‌ ಬಹುದಿನಗಳಿಂದ ಒತ್ತಾಯಿಸುತ್ತಿದೆ. ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್‌, ಬ್ರಿಟನ್‌, ಅಮೆರಿಕ ಸಹ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಭಾರತದ ಪರ ಧ್ವನಿ ಎತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!