ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆ 
ವಿದೇಶ

'ಪದಚ್ಯುತಿಗೊಳಿಸಿ ಇಲ್ಲ ತೆಗೆದುಹಾಕಿ': ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆ

ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಶನಿವಾರ ಅಮೆರಿಕದಾದ್ಯಂತ ದೊಡ್ಡ ಮತ್ತು ಸಣ್ಣ ಸಮುದಾಯಗಳ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಶ್ವೇತಭವನದ ಮುಂದೆ ರ್ಯಾಲಿ ನಡೆಸಲಾಯಿತು. 250 ವರ್ಷಗಳ ಹಿಂದೆ 1775ರ ಏಪ್ರಿಲ್ 19 ರಂದು ಕ್ರಾಂತಿಕಾರಿ ಸಮರ ಆರಂಭಗೊಂಡ ಸ್ಮರಣಾರ್ಥ ಮೆರವಣಿಗೆಗಳನ್ನು ನಡೆಸಲಾಯಿತು.

ಅಮೆರಿಕದ್ಯಂತ ಸುಮಾರು 400 ಪ್ರತಿಭಟನಾ ಮೆರವಣಿಗೆಗಳನ್ನು ಯೋಜಿಸಲಾಗಿತ್ತು. ಪ್ರತಿಭಟನಾಕಾರರು ಫೆಡರಲ್ ಉದ್ಯೋಗ ಕಡಿತ, ಆರ್ಥಿಕ ನೀತಿಗಳು ಮತ್ತು ನಾಗರಿಕ ಸ್ವಾತಂತ್ರ್ಯ ಉಲ್ಲಂಘನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಡೆನ್ಸರ್‌ನಲ್ಲಿ ನೂರಾರು ಪ್ರತಿಭಟನಾಕಾರರು ಕೊಲರಾಡೋ ಯಾ ರಾಜಧಾನಿಯಲ್ಲಿ ನೆರೆದು ವಲಸಿಗರೊಂದಿಗೆ ಸೌಹಾರ್ದ ಸಾರುವ ಮತ್ತು ಹ್ಯಾಂಡ್ಸ್ ಆಫ್ ಎಂಬ ಭಿತ್ತಿಪತ್ರಗಳನ್ನು ಹಿಡಿದಿದ್ದರು. ಶೋಕ ಸೂಚಕವಾಗಿ ಅನೇಕರು ಅಮೆರಿಕದ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಿಡಿದಿದ್ದರು.

ಪೋರ್ಟ್‌ಲ್ಯಾಂಡ್, ಓರೆಗಾನ್‌ಗಳ ಮುಖಾಂತರ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರೆ, ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನೂರಾರು ಜನರು ಟ್ರಂಪ್‌ ಅವರನ್ನು ಪದಚ್ಯುತಿಗೊಳಿಸಿ, ಇಲ್ಲವೆ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂದು ಸಮುದ್ರದಂಡೆಯ ಮರಳಿನ ಮೇಲೆ ಬರೆದು ಆಕ್ರೋಶ ವ್ಯಕ್ತಪಡಿಸಿದರು.

ಟ್ರಂಪ್ ಸರ್ಕಾರದ ಸರ್ವಾಧಿಕಾರಿ ಮನೋಭಾವದಿಂದ ದೇಶದ ಪ್ರಜಾಪ್ರಭುತ್ವವನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದು ಶಾಂತಿಯುತ ಪ್ರತಿಭಟನೆಯಾಗಿದ್ದು, ಯಾರಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಗುಂಪಿನ ವಕ್ತಾರೆ ಹೀದರ್ ಡನ್ ಹೇಳಿದ್ದಾರೆ. ದೇಶವನ್ನು ಒಗ್ಗೂಡಿಸುವುದು ಮತ್ತು ಸಂವಿಧಾನವನ್ನು ರಕ್ಷಿಸುವುದು ಈ ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT