ಡೆಲ್ಟಾ ವಿಮಾನಕ್ಕೆ ಬೆಂಕಿ 
ವಿದೇಶ

ಸ್ವಲ್ಪದರಲ್ಲೇ ತಪ್ಪಿದ ಮಹಾ ದುರಂತ: 282 ಪ್ರಯಾಣಿಕರಿದ್ದ Delta ವಿಮಾನದ ಎರಡೂ ಎಂಜಿನ್ ಗೆ ಬೆಂಕಿ!

ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ.

ಫ್ಲೋರಿಡಾ: ಅಮೆರಿಕದಲ್ಲಿ ಸಂಭಾವ್ಯ ಭೀಕರ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, 282 ಪ್ರಯಾಣಿಕರಿದ್ದ Delta ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿದ ಘಟನೆ ವರದಿಯಾಗಿದೆ.

ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನು ಗಮನಿಸಿದ ಪೈಲಟ್ ಕೂಡಲೇ ವಿಮಾನವನ್ನು ನಿಲ್ಲಿಸಿದ್ದು, ನಂತರ ಪ್ರಯಾಣಿಕರನ್ನು ತುರ್ತು ಸ್ಲೈಡ್‌ಗಳ ಮೂಲಕ ಸ್ಥಳಾಂತರಿಸಲಾಗಿದೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ಡೆಲ್ಟಾ ಏರ್ ಲೈನ್ಸ್ ಅನ್ನು ಉಲ್ಲೇಖಿಸಿ ಸಿಎನ್‌ಎನ್ ಈ ವರದಿ ಮಾಡಿದೆ.

ಅಟ್ಲಾಂಟಾಗೆ ತೆರಳುತ್ತಿದ್ದ ವಿಮಾನವು ರನ್‌ವೇಗೆ ಹೊರಟಾಗ ಎರಡು ಎಂಜಿನ್‌ಗಳಲ್ಲಿ ಒಂದು ಬೆಂಕಿಗೆ ಆಹುತಿಯಾಯಿತು. ಟರ್ಮಿನಲ್‌ನಲ್ಲಿ ಪ್ರಯಾಣಿಕರೊಬ್ಬರ ತಮ್ಮ ಸೆಲ್‌ಫೋನ್ ನಲ್ಲಿ ಈ ವಿಡಿಯೋ ಸೆರೆ ಹಿಡಿದಿದ್ದು, ವಿಮಾನದ ಬಲ ಎಂಜಿನ್‌ನಿಂದ ಜ್ವಾಲೆ ಹೊರಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಘಟನೆಯ ಬಗ್ಗೆ ಎಫ್‌ಎಎ ತನಿಖೆಯನ್ನು ಪ್ರಾರಂಭಿಸಿದೆ.

ವಿಮಾನದಲ್ಲಿ 282 ಪ್ರಯಾಣಿಕರಿದ್ದರು, ಅದೃಷ್ಟವಶಾತ್, ಯಾವುದೇ ಗಾಯಗಳು ವರದಿಯಾಗಿಲ್ಲ. ವಿಮಾನದ ಎರಡು ಎಂಜಿನ್‌ಗಳಲ್ಲಿ ಒಂದರ ಟೈಲ್‌ಪೈಪ್‌ನಲ್ಲಿ ಜ್ವಾಲೆಗಳು ಕಂಡುಬಂದಾಗ ಡೆಲ್ಟಾ ವಿಮಾನ ಸಿಬ್ಬಂದಿ ಪ್ರಯಾಣಿಕರ ಕ್ಯಾಬಿನ್ ಅನ್ನು ಸ್ಥಳಾಂತರಿಸಲು ಕಾರ್ಯವಿಧಾನಗಳನ್ನು ಅನುಸರಿಸಿದರು" ಎಂದು ಸಿಎನ್‌ಎನ್ ವರದಿ ಮಾಡಿದೆ.

ಡೆಲ್ಟಾ ಸ್ಪಷ್ಟನೆ

ಇನ್ನು ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಡೆಲ್ಟಾ ವಿಮಾನಯಾನ ಸಂಸ್ಥೆ, "ನಮ್ಮ ಗ್ರಾಹಕರ ಸಹಕಾರವನ್ನು ನಾವು ಪ್ರಶಂಸಿಸುತ್ತೇವೆ ಮತ್ತು ಈ ಕಹಿ ಘಟನೆಗಾಗಿ ಕ್ಷಮೆಯಾಚಿಸುತ್ತೇವೆ. ಸುರಕ್ಷತೆಗಿಂತ ಹೆಚ್ಚು ಮುಖ್ಯವಾದುದು ಯಾವುದೂ ಇಲ್ಲ, ಮತ್ತು ಡೆಲ್ಟಾ ತಂಡಗಳು ನಮ್ಮ ಗ್ರಾಹಕರನ್ನು ಸಾಧ್ಯವಾದಷ್ಟು ಬೇಗ ತಮ್ಮ ಅಂತಿಮ ಸ್ಥಳಗಳಿಗೆ ತಲುಪಿಸಲು ಕೆಲಸ ಮಾಡುತ್ತವೆ" ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT