ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ ನಂತರ ಜನರು ಮೇಣದಬತ್ತಿಯ ಮೆರವಣಿಗೆ ನಡೆಸಿದರು. 
ವಿದೇಶ

Pahalgam terror attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್ ಖಂಡನೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಜಾಗತಿಕ ನಾಯಕರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವಾಲ್ಡಿಮಿರ್ ಪುಟಿನ್ ಸೇರಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಸುಂದರವಾದ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ ಘಟನೆಯಲ್ಲಿ 28 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಾಗಿ ಪ್ರವಾಸಿಗರು ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಗುಂಪಿನ ಪ್ರತಿನಿಧಿಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆ ಹೊತ್ತಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಒತ್ತಿ ಹೇಳಿದ್ದಾರೆ.

ಕಾಶ್ಮೀರದಿಂದ ಬಂದಿರುವ ಆಘಾತಕಾರಿ ಸುದ್ದಿ ಇದಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ಅಮೆರಿಕ ಬಲವಾಗಿ ನಿಂತಿದೆ. ಮೃತಪಟ್ಟವರ ಆತ್ಮಗಳಿಗೆ ಮತ್ತು ಗಾಯಗೊಂಡವರ ಚೇತರಿಕೆಗೆ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಿ ಮೋದಿ ಮತ್ತು ಭಾರತದ ಜನರಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಆಳವಾದ ಸಹಾನುಭೂತಿ ಇದೆ ಎಂದು ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ದಾಳಿ ಸಂಭವಿಸಿದೆ. ಭಯೋತ್ಪಾದನಾ ದಾಳಿಯ ಮೃತರಿಗೆ ವ್ಯಾನ್ಸ್ ಸಂತಾಪ ಸೂಚಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅಪರಾಧಿಗಳು ಅರ್ಹವಾದ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ ಪತ್ರದಲ್ಲಿ, ಪುಟಿನ್ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅದರ ಸಂಘಟಕರು ಮತ್ತು ಅಪರಾಧಿಗಳು ಅರ್ಹವಾದ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ನಿರೀಕ್ಷಿಸುತ್ತಿದ್ದೇವೆ ಎಂದಿದ್ದಾರೆ.

ಎರಡು ದಿನಗಳ ಸೌದಿ ಅರೇಬಿಯಾ ಭೇಟಿಗಾಗಿ ಇಂದು ಮುಂಜಾನೆ ಸೌದಿ ಅರೇಬಿಯಾಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ದಾಳಿಯ ನಂತರ ತಮ್ಮ ಭೇಟಿಯನ್ನು ಮೊಟಕುಗೊಳಿಸಿ ನಿನ್ನೆ ರಾತ್ರಿಯೇ ದೆಹಲಿಗೆ ಮರಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಯೋತ್ಪಾದಕ ದಾಳಿಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಇಸ್ರೇಲ್‌ ಬೆಂಬಲ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT