ಪಾಕಿಸ್ತಾನ ಪ್ರಧಾನಿ ಶಹಬಾಶ್ ಷರೀಫ್ 
ವಿದೇಶ

ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ವಾಯುಪ್ರದೇಶ ನಿರ್ಬಂಧ, ವಾಘಾ ಗಡಿ ಬಂದ್!

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ, ಪಾಕಿಸ್ತಾನಿಯರಿಗೆ ವೀಸಾ ಸ್ಥಗಿತ ಸೇರಿದಂತೆ ಹಲವು ಕಠಿಣ ನಿರ್ಧಾರ ತೆಗೆದುಕೊಂಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗುರುವಾರ, ಏಪ್ರಿಲ್ 24 ರಂದು ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಸಿ) ಸಭೆ ಕರೆದಿದ್ದು, ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ವಾಯುಪ್ರದೇಶವನ್ನು ಬಂದ್ ಮಾಡಿದೆ ಮತ್ತು ಅಮೃತಸರದ ವಾಘಾ ಗಡಿಯನ್ನು ಮುಚ್ಚಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ, ಪಾಕಿಸ್ತಾನಿಯರಿಗೆ ವೀಸಾ ಸ್ಥಗಿತ ಸೇರಿದಂತೆ ಹಲವು ಕಠಿಣ ನಿರ್ಧಾರ ತೆಗೆದುಕೊಂಡಿದೆ.

ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಇದು 240 ಮಿಲಿಯನ್ ಪಾಕ್ ನಾಗರಿಕರಿಗೆ ಜೀವನಾಡಿಯಾಗಿದೆ ಎಂದು ಪಾಕಿಸ್ತಾನ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

"ಸಿಂಧೂ ಜಲ ಒಪ್ಪಂದದಡಿಯಲ್ಲಿ ಪಾಕಿಸ್ತಾನಕ್ಕೆ ಮೀಸಲಾದ ನೀರನ್ನು ಬೇರೆಡೆಗೆ ತಿರುಗಿಸಲು ಅಥವಾ ನಿಲ್ಲಿಸಲು ನಡೆಸುವ ಯಾವುದೇ ಪ್ರಯತ್ನವನ್ನು ಯುದ್ಧಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆ" ಎಂದು ಪಾಕ್ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT