ವಿದೇಶ

Pahalgam terror attack: ಉಗ್ರ ದಾಳಿ ಭೀತಿ; ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಬೆಳೆಸದಂತೆ ಅಮೆರಿಕ ಸೂಚನೆ

ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದು, 2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ನ್ಯೂಯಾರ್ಕ್/ವಾಷಿಂಗ್ಟನ್: 'ಭಯೋತ್ಪಾದನಾ ದಾಳಿಗಳು' ಮತ್ತು 'ಸಂಭಾವ್ಯ ನಾಗರಿಕ ಹಿಂಸಾತ್ಮಕ ದಾಳಿ'ಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತ-ಪಾಕಿಸ್ತಾನ ಗಡಿಯಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶಗಳಿಗೆ ಪ್ರಯಾಣ ಕೈಗೊಳ್ಳಬೇಡಿ ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಸೂಚನೆ ನೀಡಿದೆ.

ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದು, 2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಇದಾದ ಒಂದು ದಿನದ ನಂತರ ಬುಧವಾರ ಎಲ್ಲ ಅಮೆರಿಕದ ನಾಗರಿಕರಿಗೆ ಈ ಎಚ್ಚರಿಕೆ ನೀಡಲಾಗಿದೆ.

'ಭಯೋತ್ಪಾದಕ ದಾಳಿಗಳು ಮತ್ತು ಹಿಂಸಾತ್ಮಕ ಅಶಾಂತಿಯ ಸಾಧ್ಯತೆ ಇರುವುದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ (ಪೂರ್ವ ಲಡಾಖ್ ಮತ್ತು ಲೇಹ್ ಹೊರತುಪಡಿಸಿ) ಪ್ರಯಾಣಿಸದಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಶ್ರೀನಗರ, ಗುಲ್ಮಾರ್ಗ್ ಮತ್ತು ಪಹಲ್ಗಾಮ್‌ನಂತಹ ಪ್ರವಾಸಿ ತಾಣಗಳಲ್ಲಿ ಅನಿರೀಕ್ಷಿತ ಹಿಂಸಾಚಾರ ಸಂಭವಿಸುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಇದು ಸಾಮಾನ್ಯವಾಗಿದೆ' ಎಂದು ಸಲಹೆ ನೀಡಿದೆ.

'ಸಶಸ್ತ್ರ ಸಂಘರ್ಷದ ಸಾಧ್ಯತೆ ಇರುವುದರಿಂದ' ಭಾರತ-ಪಾಕಿಸ್ತಾನ ಗಡಿಯಿಂದ 10 ಕಿಲೋಮೀಟರ್ ವ್ಯಾಪ್ತಿಯ ಒಳಗೆ ಪ್ರಯಾಣ ಬೆಳೆಸುವುದನ್ನು ತಪ್ಪಿಸುವಂತೆ ತನ್ನ ನಾಗರಿಕರಿಗೆ ಸೂಚಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು ಭಾರತವು ಬುಧವಾರ 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದೆ ಮತ್ತು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮೊಟಕುಗೊಳಿಸುವುದಾಗಿ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT