ಝೀಲಂ ನದಿ 
ವಿದೇಶ

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ

ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.

ಇಸ್ಲಾಮಾಬಾದ್: ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ. ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದ್ದು, ಅಲ್ಲಿನ ಸ್ಥಲೀಯ ಆಡಳಿತವು ಹಟ್ಟಿಯನ್ ಬಾಲಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.ಮಸೀದಿಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇದರಂತೆ ನದಿ ತೀರದ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಭಾರತವು ಇಂಡಸ್‌ ವಾಟರ್‌ ಟ್ರೀಟಿ (IWT) ಒಪ್ಪಂದವನ್ನು ರದ್ದುಗೊಳಿಸುವ ಬೆದರಿಕೆ ಹಾಕಿದ ನಂತರ ಈ ಬೆಳವಣಿಗೆ ಕಂಡು ಬಂದಿದೆ.

ಈ ನಡುವೆ ಭಾರತವು ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಈ ಕ್ರಮವು ಅಂತರಾಷ್ಟ್ರೀಯ ಒಪ್ಪಂದಗಳಿಗೆ ವಿರುದ್ಧವಾಗಿದೆ ಎಂದು ಹೇಳುತ್ತಿದೆ.

ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್‌ ಮಾಧ್ಯಮಗಳು ಭಾರತದ ವಿರುದ್ಧ ಆರೋಪ ಮಾಡಿದೆ. ಭಾರತವು ಉದ್ದೇಶಪೂರ್ವಕ ‘ಜಲ ಭಯೋತ್ಪಾದನೆಯಲ್ಲಿ’ ತೊಡಗಿದೆ ಎಂದು ಪಿಒಕೆ ಸರ್ಕಾರ ಆರೋಪಿಸಿದೆ.

ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ. ಆದರೆ. ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ.

ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಭಾರತ ಸರಕಾರ ಇಂಡಸ್ ಜಲ ಒಪ್ಪಂದವನ್ನು ಅಮಾನತುಪಡಿಸಿದೆ. ಅಟಾರಿ ಗಡಿಯಲ್ಲಿರುವ ಚೆಕ್ ಪೋಸ್ಟ್ ಮುಚ್ಚಲು ಮತ್ತು ಹೈಕಮಿಷನ್‌ಗಳ ಒಟ್ಟಾರೆ ಬಲವನ್ನು ಕಡಿತಗೊಳಿಸಲು ನಿರ್ಧರಿಸಿದೆ.

ಅಧಿಕೃತ ದಾಖಲೆಗಳೊಂದಿಗೆ ಈ ಗಡಿಮಾರ್ಗವಾಗಿ ಭಾರತ ಪ್ರವೇಶಿಸಿದವರು 2025ರ ಮೇ 1ರೊಳಗೆ ವಾಪಸ್ ಹೋಗುವಂತೆ ಸೂಚಿಸಿದೆ. ಎಸ್ಪಿಇಎಸ್ ವೀಸಾದಡಿ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳು 48 ತಾಸುಗಳೊಳಗೆ ಭಾರತ ತೊರೆಯಬೇಕು ಎಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT