ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ 
ವಿದೇಶ

'ಭಾರತ ಒಳ್ಳೆಯ ವ್ಯಾಪಾರ ಪಾಲುದಾರನಲ್ಲ': ಮುಂದಿನ 24 ಗಂಟೆಗಳಲ್ಲಿ ಹೆಚ್ಚುವರಿ ಸುಂಕ; ಟ್ರಂಪ್ ಬೆದರಿಕೆ!

ಭಾರತದವರು ರಷ್ಯಾದಿಂದ ತೈಲವನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ನ್ಯೂಯಾರ್ಕ್: ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಮುಂದಾಗದ ಭಾರತದ ವಿರುದ್ಧ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ 24 ಗಂಟೆಗಳ ಒಳಗೆ ಭಾರತಕ್ಕೆ ಮತ್ತಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದಾರೆ.

CNBC ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಭಾರತ ಒಳ್ಳೆಯ ವ್ಯಾಪಾರ ಪಾಲುದಾರರಾಗಿಲ್ಲ. ಏಕೆಂದರೆ ಅವರು ನಮ್ಮೊಂದಿಗೆ ಸಾಕಷ್ಟು ವ್ಯಾಪಾರ ಮಾಡ್ತಾರೆ. ಆದರೆ ನಾವು ಅವರೊಂದಿಗೆ ವ್ಯಾಪಾರ ಮಾಡುವುದಿಲ್ಲ. ಆದ್ದರಿಂದ ನಾವು ಶೇ. 25 ರಷ್ಟು ಸುಂಕ ವಿಧಿಸಿದ್ದೇವೆ ಎಂದಿದ್ದಾರೆ.

ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಸುಂಕವನ್ನು ಗಣನೀಯವಾಗಿ ಹೆಚ್ಚಿಸಲಾಗುವುದು. ಏಕೆಂದರೆ ಭಾರತದವರು ರಷ್ಯಾದಿಂದ ತೈಲವನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಕಳೆದ ವಾರ ಭಾರತ ಮತ್ತು ರಷ್ಯಾದ ಆರ್ಥಿಕತೆಗಳನ್ನು ಸತ್ತ ಆರ್ಥಿಕತೆಗಳು ಎಂದು ಕರೆದಿದ್ದ ಟ್ರಂಪ್, ತದನಂತರ ಭಾರತದ ವಿರುದ್ಧ ಮತ್ತಷ್ಟು ಟೀಕೆಗಳನ್ನು ಮಾಡುತ್ತಲೇ ಇದ್ದಾರೆ. ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಸುಂಕವನ್ನು ವಿಧಿಸಿದ ನಂತರ ಇದೀಗ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಭಾರತ ಬೃಹತ್ ಪ್ರಮಾಣದ ರಷ್ಯಾದ ತೈಲವನ್ನು ಖರೀದಿಸುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ನಿನ್ನೆಯಷ್ಟೇ ಭಾರತವು ರಷ್ಯಾದ ತೈಲವನ್ನು "ದೊಡ್ಡ ಲಾಭಕ್ಕಾಗಿ ಮುಕ್ತ ಮಾರುಕಟ್ಟೆಯಲ್ಲಿ" ಮಾರಾಟ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದರು. ರಷ್ಯಾದ ಯುದ್ಧದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದಕ್ಕೆ ಭಾರತದವರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಕಾರಣದಿಂದಾಗಿ ಭಾರತ ಅಮೆರಿಕಕ್ಕೆ ಪಾವತಿಸುವ ಸುಂಕವನ್ನು "ಗಣನೀಯವಾಗಿ" ಹೆಚ್ಚಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂನ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

SCROLL FOR NEXT