ಲಕ್ಷ್ಮನ್ ದಾಸ್ 
ವಿದೇಶ

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲಿನ ಹಲ್ಲೆ ಹೆಚ್ಚಳ: 20 ವರ್ಷಗಳಿಂದ ವಾಸಿಸುತ್ತಿದ್ದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲೆ ಹಿಂಸಾತ್ಮಕ ದಾಳಿಗಳು ಮುಂದುವರೆಯುತ್ತಿದೆ. ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಂತ್ರಸ್ತ ಲಕ್ಷ್ಮಣ್ ದಾಸ್ 22 ವರ್ಷಗಳಿಂದ ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದು ಐರಿಶ್ ಪ್ರಜೆಯಾಗಿದ್ದಾರೆ. ಎರಡು ಮಕ್ಕಳ ತಂದೆಯಾದ ದಾಸ್, ಡಬ್ಲಿನ್‌ನ ಅನಂತರಾ ದಿ ಮಾರ್ಕರ್ ಹೋಟೆಲ್‌ನಲ್ಲಿ ಶೆಫ್ ಆಗಿ ಕೆಲಸ ಮಾಡುತ್ತಿದ್ದಾರೆ.

ಆಗಸ್ಟ್ 6ರ ಬೆಳಿಗ್ಗೆ ಅವರು ತಮ್ಮ ಇ-ಬೈಕ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಮೂವರ ತಂಡ ಅವರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದೆ. ದಾಸ್‌ ಅವರನ್ನು ಅಡ್ಡಗಟ್ಟಿದ ಗುಂಪು ಹೊಡೆಯಲು ಪ್ರಾರಂಭಿಸಿದೆ. ಇದರಿಂದಾಗಿ ಅವರ ಹೆಲ್ಮೆಟ್ ಮುರಿಯಿತು. ಘಟನೆಯ ಸಮಯದಲ್ಲಿ ಅವರ ಫೋನ್, ಕ್ರೆಡಿಟ್ ಕಾರ್ಡ್, ನಗದು ಮತ್ತು ಎಲೆಕ್ಟ್ರಿಕ್ ಬೈಕ್ ಅನ್ನು ಸಹ ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಹಲ್ಲೆಯ ನಂತರ ಲಕ್ಷ್ಮಣ್ ದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಕಾಲುಗಳು, ಕಣ್ಣು, ಭುಜ ಮತ್ತು ತೋಳಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ದಾಳಿಯಿಂದ ಚೇತರಿಸಿಕೊಳ್ಳಲು ಅವರು ಪ್ರಸ್ತುತ ರಜೆ ತೆಗೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಆಗ್ನೇಯ ಐರ್ಲೆಂಡ್‌ನ ವಾಟರ್‌ಫೋರ್ಡ್ ನಗರದಲ್ಲಿ ವಾಸವಾಗಿರುವ ಕೇರಳ ಮೂಲದ ಸದ್ಯ ಐರಿಶ್ ಪ್ರಜೆಯಾಗಿರುವ ಅನುಪ ಅಚ್ಯುತನ್ ಅವರ ಆರು ವರ್ಷದ ಮಗಳು ನಿಯಾ ನವೀನ್ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ವೇಳೆ ಭಾರತಕ್ಕೆ ಹೋಗಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT