ಮೂರನೇ ಸುಧಾರಿತ ಜಲಾಂತರ್ಗಾಮಿ ನೌಕೆ  
ವಿದೇಶ

Hangor Submarines: ಭಾರತಕ್ಕೆ ಸೆಡ್ಡು, ಪಾಕ್‌ಗೆ ಮೂರನೇ ಸುಧಾರಿತ ಜಲಾಂತರ್ಗಾಮಿ ನೌಕೆ ಹಸ್ತಾಂತರಿಸಿದ ಚೀನಾ!

ಮಧ್ಯ ಚೀನಾದ ಹುಬೈ ಪ್ರಾಂತ್ಯದ ವುಹಾನ್‌ನಲ್ಲಿ ಮೂರನೇ ಸುಧಾರಿತ ಜಲಾಂತರ್ಗಾಮಿ ನೌಕೆ ಹಸ್ತಾಂತರ ಸಮಾರಂಭ ಗುರುವಾರ ನಡೆಯಿತು

ಬೀಜಿಂಗ್: ಪಾಕಿಸ್ತಾನದ ನೌಕಪಡೆ ಬಲಪಡಿಸುವುದರೊಂದಿಗೆ ಹಿಂದೂ ಮಹಾಸಾಗರದಲ್ಲಿ ಭಾರತಕ್ಕೆ ಸೆಡ್ಡು ಹೊಡೆದು ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುವ ಚೀನಾ ʻಹ್ಯಾಂಗೋರ್ʼ ಜಲಾಂತರ್ಗಾಮಿ (Hangor Submarine) ನೌಕೆಯನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ.

ಮಧ್ಯ ಚೀನಾದ ಹುಬೈ ಪ್ರಾಂತ್ಯದ ವುಹಾನ್‌ನಲ್ಲಿ ಮೂರನೇ ಸುಧಾರಿತ ಜಲಾಂತರ್ಗಾಮಿ ನೌಕೆ ಹಸ್ತಾಂತರ ಸಮಾರಂಭ ಗುರುವಾರ ನಡೆಯಿತು ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಶನಿವಾರ ವರದಿ ಮಾಡಿದೆ. ಪಾಕಿಸ್ತಾನಕ್ಕಾಗಿ ಚೀನಾ ನಿರ್ಮಿಸುತ್ತಿರುವ ಎಂಟು ಜಲಾಂತರ್ಗಾಮಿ ನೌಕೆಗಳ ಪೈಕಿ ಎರಡನೆಯದನ್ನು ಈ ವರ್ಷದ ಮಾರ್ಚ್‌ನಲ್ಲಿ ಹಸ್ತಾಂತರಿಸಲಾಗಿತ್ತು.

ಬಲೂಚಿಸ್ತಾನ ಪ್ರಾಂತ್ಯದ ಗ್ವಾದರ್ ಬಂದರು ಇರುವ ಅರಬ್ಬೀ ಸಮುದ್ರ ಮತ್ತು ಹಿಂದೂ ಮಹಾಸಾಗರದಲ್ಲಿ ಚೀನಾದ ನೌಕಾಪಡೆಯ ಪ್ರಾಬಲ್ಯ ವಿಸ್ತರಣೆ ನಡುವೆ ಪಾಕಿಸ್ತಾನದ ನೌಕಾಪಡೆಯ ಬಲವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಕಳೆದ ಕೆಲವು ವರ್ಷಗಳಲ್ಲಿ ಚೀನಾವು ಪಾಕಿಸ್ತಾನಕ್ಕೆ ನಾಲ್ಕು ಆಧುನಿಕ ಯುದ್ಧ ನೌಕೆಗಳನ್ನು ಪೂರೈಸಿದೆ.

ಮೂರನೇ ಜಲಾಂತರ್ಗಾಮಿ ನೌಕೆ ಹಸ್ತಾಂತರ ಸಮಾರಂಭದಲ್ಲಿ ಮಾತನಾಡಿದ ಪಾಕಿಸ್ತಾನದ ನೌಕ ಸಿಬ್ಬಂದಿ ಪ್ರಾಜೆಕ್ಟ್ -2 ಉಪ ಮುಖ್ಯಸ್ಥ ಅಡ್ಮಿರಲ್ ಅಬ್ದುಲ್ ಸಮದ್, ಹ್ಯಾಂಗೋರ್ ಜಲಾಂತರ್ಗಾಮಿ ನೌಕೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸುಧಾರಿತ ಸಂವೇದಕಗಳು ಪ್ರಾದೇಶಿಕ ಶಕ್ತಿಯ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಕಡಲ ಸ್ಥಿರತೆ ಖಾತ್ರಿಗೆ ಸಹಕಾರಿಯಾಗಲಿವೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನ (SIPRI)ಇತ್ತೀಚಿನ ವರದಿಯ ಪ್ರಕಾರ, ಪಾಕಿಸ್ತಾನದ ಮಿಲಿಟರಿ ಉಪಕರಣಗಳ ಶೇ. 81 ಕ್ಕಿಂತ ಹೆಚ್ಚು ಉಪಕರಣಗಳನ್ನು ಚೀನಾ ಪೂರೈಸಿದೆ.

ಮೊದಲ ಗೂಢಚರ್ಚೆಯ ಹಡಗು ರಿಜ್ವಾನ್ ಸೇರಿದಂತೆ ಕಳೆದ ಐದು ವರ್ಷಗಳಲ್ಲಿ ಪ್ರಮುಖ ಮಿಲಿಟರಿ ಸಾಧನಗಳನ್ನು ಪಾಕಿಸ್ತಾನ ಪಡೆದುಕೊಂಡಿದೆ. ಚೀನಾ 2022 ರಲ್ಲಿ ಪಾಕಿಸ್ತಾನದ ವಾಯುಪಡೆಗೆ ಬಹು-ಪಾತ್ರ ದJ-10CE ಫೈಟರ್ ಜೆಟ್‌ಗಳನ್ನು ಪೂರೈಸಿತ್ತು. JF-17 ಯುದ್ಧವಿಮಾನಗಳನ್ನು ಎರಡೂ ದೇಶಗಳು ಜಂಟಿಯಾಗಿ ತಯಾರಿಸಿದ್ದವು. ಭಾರತದೊಂದಿಗಿನ ಇತ್ತೀಚಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನವು ಈ ಯುದ್ಧ ವಿಮಾನಗಳನ್ನು ಬಳಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT