ಪಾಕಿಸ್ತಾನದಲ್ಲಿ ಭೀಕರ ಮೇಘ ಸ್ಫೋಟ 
ವಿದೇಶ

Cloud Burst: ಪಾಕಿಸ್ತಾನದಲ್ಲಿ ಭೀಕರ ಪ್ರವಾಹ; ಇಡೀ ಪಟ್ಟಣ ವಿನಾಶ; ಕನಿಷ್ಠ 337 ಸಾವು; Video Viral

ವಾಯುವ್ಯ ಪಾಕಿಸ್ತಾನದಲ್ಲಿ ಹವಾಮಾನ ಬದಲಾವಣೆಯಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 337 ಜನರು ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮೇಘಸ್ಫೋಟದಿಂದಾಗಿ ಪಿಒಕೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 337 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಾಯುವ್ಯ ಪಾಕಿಸ್ತಾನದಲ್ಲಿ ಹವಾಮಾನ ಬದಲಾವಣೆಯಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 337 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವರು ನಾಪತ್ತೆಯಾಗಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ವಾಯುವ್ಯ ಪಾಕಿಸ್ತಾನದ ಪಾಕಿಸ್ತಾನ ಆಕ್ರಮಿತ ಖೈಬರ್ ಪಖ್ತುಂಖ್ವಾ ಮತ್ತು ಪಿಒಕೆಯ ಕಾಶ್ಮೀರ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಮೇಘಸ್ಫೋಟ ಸಂಭವಿಸಿ ಉಂಟಾದ ಭೀಕರ ಪ್ರವಾಹದಲ್ಲಿ ಇಡೀ ಪಟ್ಟಣವೊಂದು ಕೊಚ್ಚಿಕೊಂಡು ಹೋಗಿದೆ.

ಕಿಶ್ತ್ವಾರ್ ಜಿಲ್ಲೆಯಲ್ಲಿ, ತುರ್ತು ತಂಡಗಳು ಭಾನುವಾರ ದೂರದ ಚೋಸಿಟಿ ಗ್ರಾಮದಲ್ಲಿ ರಕ್ಷಣಾ ಪ್ರಯತ್ನಗಳನ್ನು ಮುಂದುವರೆಸಿವೆ. ಇಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿ ಸುಮಾರು 150 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಸುಮಾರು 50 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪರ್ವತ ಜಿಲ್ಲೆಯಾದ ಬುನೇರ್‌ನಲ್ಲಿ ಮೇಘಸ್ಫೋಟದಿಂದ ಭೀಕರ ಪ್ರವಾಹ ಉಂಟಾಗಿದ್ದು, ಗಂಟೆಗಳ ಕಾಲ ನಡೆಸಿದ ಪ್ರಯತ್ನದ ನಂತರ 54 ಶವಗಳು ಪತ್ತೆಯಾಗಿವೆ.ಹಲವಾರು ಗ್ರಾಮಸ್ಥರು ಕಾಣೆಯಾಗಿದ್ದಾರೆ ಎಂದು ತುರ್ತು ಸೇವೆಯ ವಕ್ತಾರ ಮೊಹಮ್ಮದ್ ಸುಹೈಲ್ ಹೇಳಿದ್ದಾರೆ, ಅಲ್ಲಿ ಶುಕ್ರವಾರ ಧಾರಾಕಾರ ಮಳೆ ಮತ್ತು ಮೇಘ ಸ್ಫೋಟಗಳು ಭಾರಿ ಪ್ರವಾಹಕ್ಕೆ ಕಾರಣವಾದವು.

ಪರ್ವತಗಳಿಂದ ಧಾವಿಸಿದ ನೀರಿನ ಪ್ರವಾಹದಿಂದ ಮನೆಗಳು ನೆಲಸಮಗೊಂಡ ಪ್ರದೇಶಗಳ ಮೇಲೆ ಶೋಧ ಕಾರ್ಯಗಳು ಕೇಂದ್ರೀಕರಿಸಿವೆ. ನೀರಿನ ಜೊತೆಗೇ ಮನೆಗಳ ಮೇಲೆ ಬೃಹತ್ ಗಾತ್ರದ ಅಪ್ಪಳಿಸಿದ ಬೃಹತ್ ಬಂಡೆಗಳು ಎಲ್ಲವನ್ನು ಹೊತ್ತೊಯ್ದಿದೆ.

ಕಡಿಮೆ ಸಮಯದಲ್ಲಿ ಸಣ್ಣ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಮೇಘಸ್ಫೋಟವು ಇತ್ತೀಚಿನ ದಿನಗಳಲ್ಲಿ ಭಾರತದ ಆಡಳಿತದಲ್ಲಿರುವ ಕಾಶ್ಮೀರದಲ್ಲಿ ವಿನಾಶಕ್ಕೆ ಕಾರಣವಾಗಿದೆ.

ಈಗಿನಿಂದ ಮಂಗಳವಾರದ ನಡುವೆ ಹೆಚ್ಚಿನ ಪ್ರವಾಹ ಮತ್ತು ಸಂಭವನೀಯ ಭೂಕುಸಿತಗಳ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಸ್ಥಳೀಯ ಆಡಳಿತ ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ. ಜೂನ್ 26 ರಿಂದ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದ್ದು, 600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT