ನ್ಯೂಯಾರ್ಕ್/ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದು ನಾನೇ ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಪುನರುಚ್ಛರಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕೆಂದು ಪ್ರತಿಪಾದಿಸಿದ್ದಾರೆ.
ಈವರೆಗೆ ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದು, ಪ್ರತಿಯೊಂದಕ್ಕೂ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕೊಡಬೇಕು ಎಂದು ಟ್ರಂಪ್ ಅವರು ಹೇಳಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿ ಮಾತನಾಡಿರುವ ಟ್ರಂಪ್ ಅವರು. ನಾವು ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇವೆ. ಈಗ ಮತ್ತೊಂದು ಯುದ್ಧವನ್ನು ಅಂತ್ಯಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ನಾನು ರಷ್ಯಾ–ಉಕ್ರೇನ್ ನಡುವಿನ ಯುದ್ಧ ಕೊನೆಗೊಳಿಸಿದರೆ ನೊಬೆಲ್ ಪ್ರಶಸ್ತಿ ಸಿಗಲಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಇತರೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಆ ಎಂಟು ಯುದ್ಧ ನಿಲ್ಲಿಸಿದ್ದಕ್ಕಾಗಿ ಪ್ರತಿಯೊಂದಕ್ಕೂ ನೊಬೆಲ್ ಸಿಗಬೇಕಿದೆ’ ಎಂದಿದ್ದಾರೆ.
ಮೇ 10ರಂದು, ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಂದನಿಂದಲೂ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಅವರು 60ಕ್ಕೂ ಹೆಚ್ಚು ಬಾರಿ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.
ಆದರೆ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪವ್ನು ಭಾರತ ನಿರಾಕರಿಸಿದೆ.