ಪ್ರಾವಿಡೆನ್ಸ್, ಆರ್.ಐ.ನಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದ ಪ್ರವೇಶದ್ವಾರದ ಬಳಿ ಪೊಲೀಸರು  
ವಿದೇಶ

Brown University shooting: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ, ಶಂಕಿತ ವಶಕ್ಕೆ

ಆಸ್ಪತ್ರೆಯಲ್ಲಿ ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ನಿನ್ನೆ ಸಂಜೆ 4:22 ರ ಸುಮಾರಿಗೆ ಗುಂಡಿನ ದಾಳಿ ವರದಿಯಾಗಿದೆ.

ಸ್ಥಳೀಯ ಕಾಲಮಾನ ನಿನ್ನೆ ಶನಿವಾರ ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಗುಂಡಿನ ದಾಳಿ ಆರಂಭವಾಗಿ ಮೂರು ಗಂಟೆಗಳ ನಂತರ, ವಿದ್ಯಾರ್ಥಿಗಳು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನಲ್ಲಿರುವ ಕ್ಯಾಂಪಸ್‌ನಲ್ಲಿರುವ ತಮ್ಮ ವಸತಿ ನಿಲಯಗಳು ಮತ್ತು ತರಗತಿ ಕೋಣೆಗಳಲ್ಲಿ ಅಡಗಿ ಕುಳಿತುಕೊಂಡು ತಮ್ಮನ್ನು ರಕ್ಷಿಸಿಕೊಂಡರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮೇಯರ್ ಬ್ರೆಟ್ ಸ್ಮೈಲಿ ಆರಂಭದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದು, ಪೊಲೀಸರು ಕಪ್ಪು ಬಟ್ಟೆ ಧರಿಸಿದ ಶಂಕಿತ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ. ಶಂಕಿತ ದಾಳಿಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಬರಸ್ ಮತ್ತು ಹೋಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ನಿನ್ನೆ ಸಂಜೆ 4:22 ರ ಸುಮಾರಿಗೆ ಗುಂಡಿನ ದಾಳಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT