ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ: ಬಸ್ ಅಪಹರಿಸಿ, 18 ಪ್ರಯಾಣಿಕರನ್ನು ಒತ್ತೆಯಾಳಾಗಿಸಿದ ಬಂದೂಕುಧಾರಿಗಳು!

ದಾಳಿಕೋರರು 25 ಪ್ರಯಾಣಿಕರನ್ನು ಬಸ್‌ನಿಂದ ಇಳಿಯುವಂತೆ ಕೇಳಿಕೊಂಡರು. ಆದರೆ ಮಹಿಳಾ ಪ್ರಯಾಣಿಕರಿಗೆ ಯಾವುದೇ ಹಾನಿ ಮಾಡಲಿಲ್ಲ ಎಂದು ಅವರು ಹೇಳಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಕ್ವೆಟ್ಟಾಗೆ ತೆರಳುತ್ತಿದ್ದ 30 ಜನರಿದ್ದ ಬಸ್‌ ಅನ್ನು ಅಪರಿಚಿತ ಬಂದೂಕುಧಾರಿಗಳು ಅಪಹರಿಸಿದ್ದಾರೆ.

ಸೋಮವಾರ ರಾತ್ರಿ ಘೋಟ್ಕಿ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಸಿಂಧ್ ಮತ್ತು ಪಂಜಾಬ್ ಗಡಿಯ ಸಮೀಪವಿರುವ ಹೈವೇ ಲಿಂಕ್ ರಸ್ತೆಯಲ್ಲಿ ದಾಳಿಕೋರರು ಬಸ್ ಮೇಲೆ ಗುಂಡು ಹಾರಿಸಿ, 18 ಪುರುಷ ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ.

ಗುಂಡಿನ ದಾಳಿಯಲ್ಲಿ ಚಾಲಕ ಮತ್ತು ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ನೀಡಿದ ಮಾಹಿತಿಯ ಪ್ರಕಾರ, ಒಟ್ಟು 18 ರಿಂದ 20 ದಾಳಿಕೋರರು ಸ್ಥಳದಲ್ಲಿದ್ದರು. ಎಲ್ಲರೂ ಶಸ್ತ್ರಸಜ್ಜಿತರಾಗಿದ್ದರು ಮತ್ತು ಅವರ ಮುಖಗಳನ್ನು ಮುಚ್ಚಲಾಗಿತ್ತು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ದಾಳಿಕೋರರು 25 ಪ್ರಯಾಣಿಕರನ್ನು ಬಸ್‌ನಿಂದ ಇಳಿಯುವಂತೆ ಕೇಳಿಕೊಂಡರು. ಆದರೆ ಮಹಿಳಾ ಪ್ರಯಾಣಿಕರಿಗೆ ಯಾವುದೇ ಹಾನಿ ಮಾಡಲಿಲ್ಲ ಎಂದು ಅವರು ಹೇಳಿದ್ದಾರೆ.

ಬಸ್‌ನಲ್ಲಿ ಚಾಲಕ ಮತ್ತು ಕ್ಲೀನರ್ ಹೊರತುಪಡಿಸಿ ಸುಮಾರು 30 ಪ್ರಯಾಣಿಕರು ಇದ್ದರು ಎಂದು ಸಿಂಧ್ ಗೃಹ ಸಚಿವರ ವಕ್ತಾರ ಜಿಯಾ ಉಲ್ ಹಸನ್ ಲಂಜಾರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!