ವಿಮಾನ ಪತನಗೊಂಡಿರುವುದು. 
ವಿದೇಶ

ಮೆಕ್ಸಿಕೋದಲ್ಲಿ ಖಾಸಗಿ ಜೆಟ್‌ ಪತನ; ತುರ್ತು ಭೂಸ್ಪರ್ಶ ವೇಳೆ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ; 7 ಮಂದಿ ದುರ್ಮರಣ

ಅಪಘಾತ ಸ್ಯಾನ್ ಮಾಟಿಯೊ ಅಟೆಂಕೊದ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಹಾರಾಟದ ಮಧ್ಯದಲ್ಲಿ ತಾಂತ್ರಿಕ ತೊಂದರೆಗಳನ್ನು ಎದುರಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು.

ಮೆಕ್ಸಿಕೋ: ಮೆಕ್ಸಿಕೋದ ಮಧ್ಯ ಭಾಗದಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂಸ್ಪರ್ಶದ ವೇಳೆ ಕಟ್ಟಡಕ್ಕೆ ಅಪ್ಪಳಿಸಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಮಾನ ಮೆಕ್ಸಿಕೋದ ಪೆಸಿಫಿಕ್ ಕರಾವಳಿಯ ಅಕಾಪುಲ್ಕೊದಿಂದ ಹೊರಟಿದ್ದು, ಟೊಲುಕಾ ವಿಮಾನ ನಿಲ್ದಾಣದ ಕಡೆಗೆ ಹಾರಾಟ ನಡೆಸುತ್ತಿತ್ತು. ಇದು ಖಾಸಗಿ ಜೆಟ್ ವಿಮಾನವಾಗಿದ್ದು, ಎಂಟು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು ಎಂದು ತಿಳಿದುಬಂದಿದೆ.

ಅಪಘಾತ ಸ್ಯಾನ್ ಮಾಟಿಯೊ ಅಟೆಂಕೊದ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಹಾರಾಟದ ಮಧ್ಯದಲ್ಲಿ ತಾಂತ್ರಿಕ ತೊಂದರೆಗಳನ್ನು ಎದುರಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು. ಪೈಲಟ್ ಸ್ಥಳೀಯ ಫುಟ್ಬಾಲ್ ಮೈದಾನದಲ್ಲಿ ವಿಮಾನವನ್ನು ಇಳಿಸಲು ಯತ್ನಿಸಿದರು. ಆದರೆ, ಹಾರಾಟದ ಸಮಯದಲ್ಲಿ ವಿಮಾನವು ಹತ್ತಿರದ ಕಟ್ಟಡದ ಲೋಹದ ಛಾವಣಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮವಾಗಿ ವಿಮಾನಕ್ಕೆ ಭಾರಿ ಬೆಂಕಿ ಹೊತ್ತಿಕೊಂಡು ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿಕೊಂಡಿತು. ಬೆಂಕಿಯ ತೀವ್ರತೆಯು ತಕ್ಷಣವೇ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪಘಾತದ ನಂತರ ಅಗ್ನಿಶಾಮಕ ದಳ ಮತ್ತು ರೆಡ್ ಕ್ರಾಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಕಾರ್ಯಾಚರಣೆ ವೇಳೆ 7 ಮಂದಿ ಶವಗಳನ್ನು ಹೊರ ತೆಗೆಯಲಾಗಿದ್ದು, ಉಳಿದ ಮೂವರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!