ಮುಹಮ್ಮದ್ ಯೂನಸ್ 
ವಿದೇಶ

ಹಿಂದೂ ಯುವಕನ ಬರ್ಬರ ಹತ್ಯೆ: ವ್ಯಾಪಕ ಆಕ್ರೋಶ ಬೆನ್ನಲ್ಲೆ 7 ಆರೋಪಿಗಳನ್ನು ಬಂಧಿಸಿದ್ದಾಗಿ ಯೂನಸ್ ಘೋಷಣೆ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನೊಬ್ಬನನ್ನು ಮುಸ್ಲಿಂ ಗುಂಪೊಂದು ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಪ್ರಕರಣದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೊಹಮ್ಮದ್ ಯೂನಸ್ ಸರ್ಕಾರ ಕ್ರಮ ಕೈಗೊಂಡಿದೆ.

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನೊಬ್ಬನನ್ನು ಮುಸ್ಲಿಂ ಗುಂಪೊಂದು ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಪ್ರಕರಣದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೊಹಮ್ಮದ್ ಯೂನಸ್ ಸರ್ಕಾರ ಕ್ರಮ ಕೈಗೊಂಡಿದೆ. ಬಾಂಗ್ಲಾದೇಶದ ಕ್ಷಿಪ್ರ ಕಾರ್ಯ ಬೆಟಾಲಿಯನ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಈ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಅವರ ಅಧಿಕೃತ ಹ್ಯಾಂಡಲ್‌ನ ಪೋಸ್ಟ್‌ನಲ್ಲಿ, ಮೈಮೆನ್‌ಸಿಂಗ್‌ನ ಭಾಲುಕಾದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ (27) ಮೇಲಿನ ಹಲ್ಲೆ ಪ್ರಕರಣದಲ್ಲಿ ಕ್ಷಿಪ್ರ ಕಾರ್ಯ ಬೆಟಾಲಿಯನ್ (RAB) ಏಳು ಜನರನ್ನು ಶಂಕಿತರಾಗಿ ಬಂಧಿಸಿದೆ ಎಂದು ಬರೆದಿದ್ದಾರೆ.

ಪೋಸ್ಟ್‌ನಲ್ಲಿ RAB-14 ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತರನ್ನು ಬಂಧಿಸಿದೆ ಎಂದು ಹೇಳಲಾಗಿದೆ. 1- ಮೊಹಮ್ಮದ್ ಲಿಮನ್ ಸರ್ಕಾರ್ (19) 2- ಮೊಹಮ್ಮದ್ ತಾರೆಕ್ ಹೊಸೈನ್ (19) 3- ಮೊಹಮ್ಮದ್ ಮಾಣಿಕ್ ಮಿಯಾ (20) 4- ಇರ್ಷಾದ್ ಅಲಿ (39) 5- ನಿಜುಮ್ ಉದ್ದೀನ್ (20) 6- ಅಲೋಮ್‌ಗೀರ್ ಹೊಸೈನ್ (38) 7- ಮೊಹಮ್ಮದ್ ಮಿರಾಜ್ ಹೊಸೈನ್ ಅಕಾನ್ (46) ಎಂದು ಗುರುತಿಸಲಾಗಿದೆ.

ದೇವ ನಿಂದನೆಯ ಆರೋಪದ ಮೇಲೆ ಗುರುವಾರ ದಿಪು ಚಂದ್ರ ದಾಸ್ ಅವರನ್ನು ಹೊಡೆದು ಕೊಂದು ಆತನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಯಿತು. ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಇತ್ತೀಚಿನ ಘಟನೆ ಇದು. ದಿಪು ಚಂದ್ರ ದಾಸ್ ಮೈಮೆನ್ಸಿಂಗ್ ನಗರದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯಂತರ ಸರ್ಕಾರವು ಮೈಮೆನ್ಸಿಂಗ್ ನಗರದಲ್ಲಿ ಹಿಂದೂ ವ್ಯಕ್ತಿಯೊಬ್ಬರ ಹತ್ಯೆಯನ್ನು ತೀವ್ರವಾಗಿ ಖಂಡಿಸಿತು. ಹೊಸ ಬಾಂಗ್ಲಾದೇಶದಲ್ಲಿ ಅಂತಹ ಹಿಂಸಾಚಾರಕ್ಕೆ ಸ್ಥಳವಿಲ್ಲ ಎಂದು ಹೇಳಿದೆ. ಈ ಘೋರ ಅಪರಾಧದ ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಸರ್ಕಾರ ಹೇಳಿದೆ.

ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಕಳುಹಿಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು, "ಹಿಂಸಾಚಾರ, ಬೆದರಿಕೆ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿ ನಾಶದ ಎಲ್ಲಾ ಕೃತ್ಯಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT