ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಮ್ರಾಮ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
2023ರಲ್ಲಿ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ನ್ಯಾಯಾಲಯವು 14 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಕ್ಕೂ ಮುನ್ನ ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. 1974 ರಲ್ಲಿ ಸ್ಥಾಪಿತವಾದ ತೋಷಖಾನಾವು ಕ್ಯಾಬಿನೆಟ್ ವಿಭಾಗದ ಆಡಳಿತ ನಿಯಂತ್ರಣದಲ್ಲಿರುವ ಒಂದು ಇಲಾಖೆಯಾಗಿದೆ.
ಇತರ ಸರ್ಕಾರಗಳು ಮತ್ತು ರಾಜ್ಯಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ಆಡಳಿತಗಾರರು, ಸಂಸದರು, ಅಧಿಕಾರಿಗಳು ಮತ್ತು ಅಧಿಕಾರಿಗಳಿಗೆ ನೀಡಿದ ಅಮೂಲ್ಯ ಉಡುಗೊರೆಗಳನ್ನು ಸಂಗ್ರಹಿಸುತ್ತದೆ.
ಉಡುಗೊರೆಯಾಗಿ ಬಂದ ಆಸ್ತಿಗಳನ್ನು ಇಮ್ರಾನ್ ತಾವೇ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತೋಷಖಾನಾವು ಕ್ಯಾಬಿನೆಟ್ ವಿಭಾಗದ ಅಡಿಯಲ್ಲಿ ಬರುವ ಒಂದು ಇಲಾಖೆ,, ಇದು ಆಡಳಿತಗಾರರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಇತರ ಸರ್ಕಾರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ನೀಡಿದ ಉಡುಗೊರೆಗಳನ್ನು ಸಂಗ್ರಹಿಸುತ್ತದೆ. ಖಾನ್ ಅವರು ಬೆಲೆಬಾಳುವ ವಾಚ್ ಸೇರಿದಂತೆ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಅವುಗಳನ್ನು ಲಾಭಕ್ಕಾಗಿ ಮಾರಾಟ ಮಾಡಿದ್ದರು ಎಂಬುದು ಆರೋಪವಾಗಿದೆ.
ಇಮ್ರಾನ್ ಖಾನ್ ತೋಷಖಾನಾದಿಂದ ಉಳಿಸಿಕೊಂಡ ಉಡುಗೊರೆಗಳ ವಿವರಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂದು ಇಸಿಪಿ ಸಲ್ಲಿಸಿದ ಕ್ರಿಮಿನಲ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಕಳೆದ ವರ್ಷ ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ವಿರುದ್ಧ ಪಾಕಿಸ್ತಾನದ ನ್ಯಾಯಾಲಯ ಆರೋಪ ಹೊರಿಸಿತ್ತು. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆದ ವಿಚಾರಣೆ ವೇಳೆ, ವಿಶೇಷ ನ್ಯಾಯಾಲದ ನ್ಯಾಯಾಧೀಶ ಶಾರುಕ್ ಅರ್ಜುಮಂದ್ ಅವರು ಈ ಇಬ್ಬರ ವಿರುದ್ಧ ಆರೋಪ ಹೊರಿಸಿದ್ದರು.