ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್  
ವಿದೇಶ

'ಚೀನಾ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ, ನೀವು ಮಧ್ಯೆ ಬರುವುದು ಬೇಡ': Donald Trump ಆಫರ್ ತಿರಸ್ಕರಿಸಿದ ಭಾರತ

ಗಡಿ ಸಮಸ್ಯೆ ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಚೀನಾ ವಿಷಯದಲ್ಲಿ ಕೂಡ ಅದನ್ನು ಪಾಲಿಸುತ್ತದೆ.

ನವದೆಹಲಿ: ಭಾರತ-ಚೀನಾ ಗಡಿ ಸಂಘರ್ಷವನ್ನು "ಭೀಕರ ಘರ್ಷಣೆ" ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಾಯ ಮಾಡುವ ಇಚ್ಛೆಯನ್ನು ಚೀನಾದೊಂದಿಗಿನ ಗಡಿ ಉದ್ವಿಗ್ನ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸುವ ಅವರ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಭಾರತದ ನಿಲುವನ್ನು ಪ್ರಧಾನಿ ಮೋದಿಯವರ ಅಮೆರಿಕ ಭೇಟಿ ಸಂದರ್ಭದಲ್ಲಿ ಪುನರುಚ್ಛರಿಸಿದರು. ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ನಂತರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ತನ್ನ ನೆರೆಹೊರೆ ದೇಶಗಳೊಂದಿಗೆ ಸಮಸ್ಯೆಗಳನ್ನು ಪರಿಹರಿಸಲು ದೇಶವು ಯಾವಾಗಲೂ ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಚೀನಾದ ವಿಷಯದಲ್ಲಿ ಕೂಡ ಇದೇ ರೀತಿಯ ನಿಲುವನ್ನು ಭಾರತ ಹೊಂದಿದೆ ಎಂದಿದ್ದಾರೆ.

ಗಡಿ ಸಮಸ್ಯೆ ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಚೀನಾ ವಿಷಯದಲ್ಲಿ ಕೂಡ ಅದನ್ನು ಪಾಲಿಸುತ್ತದೆ. ನಾವು ಅವರೊಂದಿಗೆ ಹೊಂದಿರುವ ಯಾವುದೇ ಸಮಸ್ಯೆಗಳನ್ನು ದ್ವಿಪಕ್ಷೀಯ ಮಟ್ಟದಲ್ಲಿ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, "ನಾನು ಭಾರತದ ಕಡೆ ಯಾವಾಗಲೂ ನೋಡುತ್ತೇನೆ, ಗಡಿಯಲ್ಲಿನ ಘರ್ಷಣೆಗಳಿಂದ ಸಾಕಷ್ಟು ಕೆಟ್ಟದಾಗಿವೆ, ಅದು ನಿಲ್ಲಬೇಕು, ಸಾಧ್ಯವಾದರೆ ಭಾರತಕ್ಕೆ ಸಹಾಯ ಮಾಡುತ್ತೇವೆ ಎಂದಿದ್ದಾರೆ.

ಟ್ರಂಪ್ ಆರಂಭದಲ್ಲಿ ಅಮೆರಿಕ-ಚೀನಾ ಸಂಬಂಧಗಳ ಬಗ್ಗೆ ಮಾತನಾಡುತ್ತಿದ್ದರು, ಕೋವಿಡ್ ಸಾಂಕ್ರಾಮಿಕ ರೋಗವು ಸಂಬಂಧಗಳನ್ನು ಬಿಗಡಾಯಿಸುವವರೆಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಬಲವಾದ ಬಾಂಧವ್ಯವನ್ನು ಹೊಂದಿದ್ದಾಗಿ ಹೇಳಿದರು.

ನಂತರ ಅವರು ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿ ಬಗ್ಗೆ ಮಾತನಾಡಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದರು. ಆದರೆ ಭಾರತವು ಈ ಪ್ರಸ್ತಾಪವನ್ನು ತ್ವರಿತವಾಗಿ ನಿರಾಕರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT