ಅಪಘಾತಕ್ಕೀಡಾದ ಡೆಲ್ಟಾ ಏರ್‌ಲೈನ್ಸ್ ವಿಮಾನ 
ವಿದೇಶ

ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪಲ್ಟಿ; 18 ಮಂದಿಗೆ ಗಾಯ

ಆರಂಭಿಕ ವರದಿಯಲ್ಲಿ ಯಾವುದೇ ಸಾವು- ನೋವುಗಳನ್ನು ಖಚಿತಪಡಿಸಿಲ್ಲ. ಗಾಯಗೊಂಡ 18 ಪ್ರಯಾಣಿಕರನ್ನು ಪ್ರದೇಶ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಿಂದ ತೊಂದರೆಯಾದವರತ್ತ ನಮ್ಮ ಗಮನ ಕೇಂದ್ರೀಕರಿಸಿರುವುದಾಗಿ ಡೆಲ್ಟಾ ಏರ್ ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಟೊರೊಂಟೊ: ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಡೆಲ್ಟಾ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾದ ನಂತರ ಕನಿಷ್ಠ 18 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಭರಿತ ನೆಲದ ಮೇಲೆ ವಿಮಾನ ಮಗುಚಿ ಬಿದ್ದಿರುವುದಾಗಿ ಸಿಎನ್ ಎನ್ ವರದಿ ಮಾಡಿದೆ.

ಆರಂಭಿಕ ವರದಿಯಲ್ಲಿ ಯಾವುದೇ ಸಾವು- ನೋವುಗಳನ್ನು ಖಚಿತಪಡಿಸಿಲ್ಲ. ಗಾಯಗೊಂಡ 18 ಪ್ರಯಾಣಿಕರನ್ನು ಪ್ರದೇಶ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಿಂದ ತೊಂದರೆಯಾದವರತ್ತ ನಮ್ಮ ಗಮನ ಕೇಂದ್ರೀಕರಿಸಿರುವುದಾಗಿ ಡೆಲ್ಟಾ ಏರ್ ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಮಿನ್ನಿಯಾಪೋಲಿಸ್‌ನಿಂದ ಬರುತ್ತಿದ್ದ 80 ಜನರಿದ್ದ ವಿಮಾನ ರನ್‌ವೇಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಹಿನ್ನಲೆಯಲ್ಲಿ ಟೊರೊಂಟೊ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಎಲ್ಲಾ ವಿಮಾನಗಳನ್ನು ಏರ್ ಲೈನ್ಸ್ ರದ್ದುಗೊಳಿಸಿತ್ತು. ಘಟನೆ ನಂತರ ತುರ್ತು ಕಾರ್ಯಾಚರಣೆ ತಂಡಗಳು ಕಾರ್ಯಾಚರಣೆ ನಡೆಸಿರುವುದಾಗಿ ಟೊರೊಂಟಾ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT