ವಿದೇಶ

ಮಟನ್‌ ಜೊತೆ ಗೋಮಾಂಸ ಬಳಕೆ ಆರೋಪ: ಬ್ರಿಟನ್‌ನಲ್ಲಿ ಪಾಕ್ ರೆಸ್ಟೋರೆಂಟ್ ಧ್ವಂಸಗೊಳಿಸಿದ ಭಾರತೀಯರು, ವಿಡಿಯೋ!

ಕುರಿ ಮಾಂಸದ ಜೊತೆಗೆ ಗೋಮಾಂಸ ಬೆರೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯರು ಬ್ರಿಟನ್‌ನಲ್ಲಿನ ಪಾಕ್ ರೆಸ್ಟೋರೆಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕುರಿ ಮಾಂಸದ ಜೊತೆಗೆ ಗೋಮಾಂಸ ಬೆರೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯರು ಬ್ರಿಟನ್‌ನಲ್ಲಿನ ಪಾಕ್ ರೆಸ್ಟೋರೆಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಭಾರತೀಯರು ರೆಸ್ಟೋರೆಂಟ್ ಸಿಬ್ಬಂದಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ರೆಸ್ಟೋರೆಂಟ್ ನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದು 2 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ರೆಸ್ಟೋರೆಂಟ್ ಮಾಲೀಕರು ಆರೋಪಿಸಿದ್ದಾರೆ.

ಬ್ರಿಟನ್ ನಲ್ಲಿರುವ ಶೆಫೀಲ್ಡ್‌ನ ರೆಸ್ಟೋರೆಂಟ್ ಒಂದರಲ್ಲಿ ಬೀಫ್‌ ಖಾದ್ಯದ ವಿಚಾರವಾಗಿ ಗಲಾಟೆ ನಡೆದಿದೆ. ಇಲ್ಲಿನ ಅಬ್ಬಾಸಿನ್‌ ಡಿನ್ನರ್‌ ರೆಸ್ಟೋರೆಂಟ್‌ಗೆ ಊಟಕ್ಕೆಂದು ಬಂದ ಭಾರತೀಯ ಮೂಲದ ಗ್ರಾಹಕರು ಮೆನುವಿನಲ್ಲಿ ಬೀಫ್‌ ಖಾದ್ಯಗಳ ಹೆಸರನ್ನು ಕಂಡು ಕೋಪಗೊಂಡು ಮಾಲೀಕ ಮಹಮ್ಮದ್‌ ಉಲ್ಲಾ ಮೇಲೆ ಹಲ್ಲೆ ನಡೆಸಿದ್ದಾರೆ.

ಬ್ರಿಟಿಷ್ ಮಾಧ್ಯಮ ವರದಿಗಳ ಪ್ರಕಾರ, ಉಗ್ರರು ರೆಸ್ಟೋರೆಂಟ್ ಕಿಟಕಿಗಳನ್ನು ಒಡೆದು, ಕುರ್ಚಿಗಳು ಮತ್ತು ಟೇಬಲ್‌ಗಳನ್ನು ಉರುಳಿಸುವ ಮೂಲಕ ಮತ್ತು ವಿವಿಧ ವಸ್ತುಗಳನ್ನು ಹಾನಿ ಮಾಡುವ ಮೂಲಕ ಧ್ವಂಸಗೊಳಿಸಿದ್ದಾರೆ. ಹಿಂದೂಗಳಿಗೆ ಪವಿತ್ರವಾದ ಗೋಮಾಂಸವನ್ನು ತಮ್ಮ ಭಕ್ಷ್ಯಗಳಲ್ಲಿ ಮಟನ್‌ನೊಂದಿಗೆ ಬೆರೆಸುತ್ತಾರೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ, ಗೊಂದಲ ಮತ್ತು ಆಸ್ತಿ ಹಾನಿ ಹಿನ್ನೆಲೆಯಲ್ಲಿ ಭಾರತೀಯರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT