ಪ್ರಧಾನಿ ಮೋದಿ 
ವಿದೇಶ

ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಪ್ರದಾನ; Video

ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ.

ಅಕ್ರಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾ ದೇಶದ ರಾಷ್ಟ್ರೀಯ ಪ್ರಶಸ್ತಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರದಾನ ಮಾಡಿ ಗೌರವಿಸಲಾಗಿದೆ. ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ.

ಘಾನಾ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮಾ ಅವರಿಂದ ಮೋದಿ ಬುಧವಾರ ಪ್ರಶಸ್ತಿ ಸ್ವೀಕರಿಸಿದರು. ಈ ಪ್ರಶಸ್ತಿಯು ತನಗೆ ಅತ್ಯಂತ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಗೌರವ 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ಎರಡು ದೇಶಗಳ ಯುವ ಜನತೆಯ ಆಕಾಂಕ್ಷೆಗಳು, ಉಜ್ವಲ ಭವಿಷ್ಯ, ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆ ಹಾಗೂ ಭಾರತ ಮತ್ತು ಘಾನಾದ ನಡುವಿನ ಐತಿಹಾಸಿಕ ಸಂಬಂಧಗಳಿಗೆ ಅರ್ಪಿಸುತ್ತೇನೆ ಎಂದಿದ್ದಾರೆ.

ಈ ಗೌರವ ಭಾರತ-ಘಾನಾ ಸ್ನೇಹಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವ ಒಂದು ಜವಾಬ್ದಾರಿಯೂ ಆಗಿದೆ. ಭಾರತವು ಯಾವಾಗಲೂ ಘಾನಾದ ಜನರೊಂದಿಗೆ ನಿಲ್ಲುತ್ತದೆ ಮತ್ತು ವಿಶ್ವಾಸಾರ್ಹ ಮತ್ತು ಅಭಿವೃದ್ಧಿ ಪಾಲುದಾರನಾಗಿ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ" ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ