ಕಟ್ಟಡ ಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯದ ಚಿತ್ರ 
ವಿದೇಶ

ಪಾಕಿಸ್ತಾನ: ಕರಾಚಿಯಲ್ಲಿ ಕಟ್ಟಡ ಕುಸಿತ, ಮೃತರ ಸಂಖ್ಯೆ 27ಕ್ಕೆ ಏರಿಕೆ; ಇನ್ನು ಅವಶೇಷಗಳಡಿ ಹಲವರ ನಾಪತ್ತೆ

ಲಿಯಾರಿಯ ಬಾಗ್ದಾದಿ ಪ್ರದೇಶದಲ್ಲಿ ಶುಕ್ರವಾರ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು.

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಬಹುಮಹಡಿ ವಸತಿ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಲಿಯಾರಿಯ ಬಾಗ್ದಾದಿ ಪ್ರದೇಶದಲ್ಲಿ ಶುಕ್ರವಾರ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಮೃತರಾದ ಒಂಬತ್ತು ಮಹಿಳೆಯರು, 15 ಪುರುಷರು, ಮೂವರು ಮಕ್ಕಳು ಸೇರಿದಂತೆ ಒಟ್ಟು 27 ಮೃತದೇಹಗಳು ಇಲ್ಲಿಯವರೆಗೆ ಪತ್ತೆಯಾಗಿವೆ.

ಮೃತದೇಹಗಳನ್ನು ಈಧಿ ಆಂಬ್ಯುಲೆನ್ಸ್ ಮೂಲಕ ಕರಾಚಿಯ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಡಾನ್ ನ್ಯೂಸ್ ಪೇಪರ್ ವರದಿ ಮಾಡಿದೆ. ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ.

ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಮೂವರು ಮಹಿಳೆಯರು ಸೇರಿದಂತೆ ಐದು ಜನರು ಇಲ್ಲಿಯವರೆಗೆ ಗಾಯಗೊಂಡಿದ್ದಾರೆ ಎಂದು ಈಧಿ ರಕ್ಷಣಾ ಸೇವೆ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

ಈ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ, ಕಟ್ಟಡ ಕುಸಿತಕ್ಕೆ ಕಾರಣಗಳ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್