ಉಗ್ರರು ಗುಂಡಿನ ದಾಳಿ ನಡೆಸಿದ ಸ್ಥಳ 
ವಿದೇಶ

ಪಾಕ್​ಗೆ ಮತ್ತೊಂದು ಮುಖಭಂಗ: ಪಹಾಲ್ಗಾಮ್ ದಾಳಿ ನಡೆಸಿದ ‘The Resistance Front’ ಉಗ್ರ ಸಂಘಟನೆ ಎಂದು ಅಮೆರಿಕಾ ಘೋಷಣೆ

ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ, ಈ ಮೂಲಕ ಪಾಕಿಸ್ತಾನ ಮೂಲದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪಹಲ್ಗಾಮ್ ದಾಳಿ ಹಿಂದಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾ(ಎಲ್‌ಇಟಿ)ಗೆ ಸೇರಿದ ದಿ ರೆಸಿಸ್ಟೆನ್ಸ್ ಫ್ರಂಟ್'ನ್ನು ವಿದೇಶಿ ಉಗ್ರ ಸಂಘಟನೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಮುಖಭಂಗವಾಗಿದೆ.

ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ, ಈ ಮೂಲಕ ಪಾಕಿಸ್ತಾನ ಮೂಲದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಲಷ್ಕರ್ ಉಗ್ರ ಸಂಘಟನೆಯ ಜೊತೆಗೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರಿಸಿರುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಘೋಷಣೆ ಮಾಡಿದೆ.

26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಗುಂಪಿನ ಸಂಘಟನೆಯಾಗಿರುವ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್ಎಫ್) ಅನ್ನು ಅಮೆರಿಕ ಅಧಿಕೃತವಾಗಿ ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿದೆ.

ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಗುರುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಪಹಲ್ಗಾಮ್ ದಾಳಿಗೆ ನ್ಯಾಯ ಒದಗಿಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಕರೆಯನ್ನು ಜಾರಿಗೊಳಿಸುವ ಅಮೆರಿಕದ ಬದ್ಧತೆಯನ್ನು ಇದು ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಅನ್ನು ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಸ್ಥೆ (ಎಫ್‌ಟಿಒ) ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ (ಎಸ್‌ಡಿಜಿಟಿ) ಎಂದು ಸೇರಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಶ್ಮೀರ ಪ್ರತಿರೋಧ ಎಂದೂ ಕರೆಯಲ್ಪಡುವ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್), ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಕೆಲವು ದಿನಗಳ ನಂತರ, ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡು ದಾಳಿಯನ್ನು ನಿರಾಕರಿಸಿತ್ತು.

ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಪಾಕ್‌ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು, Video!

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCROLL FOR NEXT