ಚೀನಾ-ಭಾರತ 
ವಿದೇಶ

ಐದು ವರ್ಷಗಳ ನಂತರ, ಚೀನಾ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಿದ ಭಾರತ

ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗುರುವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಬೀಜಿಂಗ್: ಗಾಲ್ವಾನ್ ಕಣಿವೆಯಲ್ಲಿ ನಡೆದ ಮಿಲಿಟರಿ ಘರ್ಷಣೆಯ ನಂತರ ತೀವ್ರ ಒತ್ತಡಕ್ಕೆ ಸಿಲುಕಿದ್ದ ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಈ ವಾರದಿಂದ ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಘೋಷಿಸಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತ 2020 ರಲ್ಲಿ ಚೀನೀ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಸ್ಥಗಿತಗೊಳಿಸಿತ್ತು. ಬಳಿಕ ಪೂರ್ವ ಲಡಾಖ್ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ನಿರ್ಬಂಧಗಳು ಮುಂದುವರೆದಿದ್ದವು.

ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗುರುವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಭಾರತೀಯ ರಾಯಭಾರ ಕಚೇರಿಯು ತನ್ನ ಅಧಿಸೂಚನೆಯಲ್ಲಿ ಪ್ರವಾಸಿ ವೀಸಾಗಳಿಗೆ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಪ್ರಕ್ರಿಯೆ, ಬೀಜಿಂಗ್, ಶಾಂಘೈ ಮತ್ತು ಗುವಾಂಗ್‌ಝೌನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳಲ್ಲಿ ಚೀನೀ ಪ್ರಜೆಗಳು ಸಲ್ಲಿಸಬೇಕಾದ ದಾಖಲೆಗಳನ್ನು ಸಹ ವಿವರಿಸಿದೆ.

ಪ್ರವಾಸಿ ವೀಸಾ ನೀಡುವುದನ್ನು ಪುನರಾರಂಭಿಸುವ ಭಾರತದ ನಿರ್ಧಾರವನ್ನು ಚೀನಾ ವಿದೇಶಾಂಗ ಸಚಿವಾಲಯ ಸ್ವಾಗತಿಸಿದೆ, ಇದು ಗಡಿಯಾಚೆಗಿನ ಪ್ರಯಾಣವನ್ನು ಸುಗಮಗೊಳಿಸಲು ಸಕಾರಾತ್ಮಕ ಕ್ರಮವಾಗಿದೆ ಎಂದು ಹೇಳಿದೆ.

"ಇದು ಸಕಾರಾತ್ಮಕ ಕ್ರಮವಾಗಿದೆ" ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು ಸುದ್ದಿಗೋಷ್ಠಿಯಲ್ಲಿ ಭಾರತದ ನಿರ್ಧಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

"ಗಡಿಯಾಚೆಗಿನ ಪ್ರಯಾಣವನ್ನು ಸರಾಗಗೊಳಿಸಲು ಇದು ಪ್ರಯೋಜನಕಾರಿಯಾಗಿದೆ. ಎರಡೂ ದೇಶಗಳ ನಡುವಿನ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಲು ಚೀನಾ ಭಾರತದೊಂದಿಗೆ ಸಂವಹನ ಮತ್ತು ಸಮಾಲೋಚನೆಯನ್ನು ನಿರ್ವಹಿಸುತ್ತದೆ" ಎಂದು ಅವರು ಹೇಳಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬೀಜಿಂಗ್‌ನಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ಸುಮಾರು ಒಂದೂವರೆ ವಾರದ ನಂತರ ಪ್ರವಾಸಿ ವೀಸಾ ಪುನರಾರಂಭಿಸುವ ಭಾರತೀಯ ರಾಯಭಾರ ಕಚೇರಿಯ ನಿರ್ಧಾರ ಹೊರಬಿದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!

SCROLL FOR NEXT