ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಾತನಾಡುತ್ತಿದ್ದಾರೆ. 
ವಿದೇಶ

ಪಾಕಿಸ್ತಾನ ಸರಣಿ ಸಾಲಗಾರ, ಮತಾಂಧತೆ-ಭಯೋತ್ಪಾದನೆಯಲ್ಲಿ ಮುಳುಗಿದೆ: UNSC ಸಭೆಯಲ್ಲಿ ಭಾರತ ಕಟು ಟೀಕೆ

ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಬಗ್ಗೆ ನಾವು ಚರ್ಚಿಸುತ್ತಿರುವಾಗ, ಸಾರ್ವತ್ರಿಕವಾಗಿ ಗೌರವಿಸಬೇಕಾದ ಕೆಲವು ಮೂಲಭೂತ ತತ್ವಗಳಿವೆ ಎಂದು ಗುರುತಿಸುವುದು ಅತ್ಯಗತ್ಯ.

ವಿಶ್ವಸಂಸ್ಥೆ: ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಚೋದಿಸುವ ರಾಷ್ಟ್ರಗಳು ಗಂಭೀರ ಬೆಲೆ ತೆರಬೇಕಾಗುತ್ತದೆ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಹೇಳಿದೆ. ಪಾಕಿಸ್ತಾನ ಹಾಜರಾಗಿದ್ದ ಸಭೆಯಲ್ಲಿ ಅಲ್ಲಿನ ನಾಯಕರ ಮುಂದೆಯೇ ಭಾರತ ಈ ದಿಟ್ಟ ಮಾತುಗಳನ್ನು ಹೇಳಿದ್ದು, ನೆರೆಯ ದೇಶವನ್ನು ಮತಾಂಧತೆಯಲ್ಲಿ ಮುಳುಗಿರುವ ಸರಣಿ ಸಾಲಗಾರ ಎಂದು ಬಣ್ಣಿಸಿದೆ.

ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಬಗ್ಗೆ ನಾವು ಚರ್ಚಿಸುತ್ತಿರುವಾಗ, ಸಾರ್ವತ್ರಿಕವಾಗಿ ಗೌರವಿಸಬೇಕಾದ ಕೆಲವು ಮೂಲಭೂತ ತತ್ವಗಳಿವೆ ಎಂದು ಗುರುತಿಸುವುದು ಅತ್ಯಗತ್ಯ. ಅವುಗಳಲ್ಲಿ ಒಂದು ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಹೇಳಿದರು.

ಜುಲೈ ತಿಂಗಳಿಗೆ ಪಾಕಿಸ್ತಾನದ ಅಧ್ಯಕ್ಷತೆಯಲ್ಲಿ ನಡೆದ ಬಹುಪಕ್ಷೀಯತೆ ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥದ ಮೂಲಕ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಕುರಿತು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಮುಕ್ತ ಚರ್ಚೆಯಲ್ಲಿ ಪರ್ವತನೇನಿ ಹರೀಶ್ ಕಳೆದ ರಾತ್ರಿ ಈ ಮಾತುಗಳನ್ನು ಹೇಳಿದ್ದಾರೆ.

ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಭಾಷಣ ಮಾಡಿದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿದ್ದರು. ಚರ್ಚೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯ ಹಾಗೂ ಸಿಂಧೂ ಜಲ ಒಪ್ಪಂದದ ಬಗ್ಗೆ ಪ್ರಸ್ತಾಪಿಸಿದರು.

ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲ ತ್ಯಜಿಸುವವರೆಗೆ 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ಭಾರತ ನಿರ್ಧರಿಸಿತು. ಮುಕ್ತ ಚರ್ಚೆಯಲ್ಲಿ ಟರ್ಕಿ ತನ್ನ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಉಲ್ಲೇಖಿಸಿದರು.

ದಾರ್ ಅವರ ಹೇಳಿಕೆಗಳಿಗೆ ಬಲವಾದ ಪ್ರತಿಕ್ರಿಯೆಯನ್ನು ನೀಡಿದ ಹರೀಶ್, ಭಾರತೀಯ ಉಪಖಂಡವು ಪ್ರಗತಿ, ಸಮೃದ್ಧಿ ಮತ್ತು ಅಭಿವೃದ್ಧಿ ಮಾದರಿಗಳ ವಿಷಯದಲ್ಲಿ ತೀವ್ರ ವ್ಯತಿರಿಕ್ತತೆಯನ್ನು ನೀಡುತ್ತದೆ. ಒಂದೆಡೆ, ಭಾರತವು ಪ್ರಬುದ್ಧ ಪ್ರಜಾಪ್ರಭುತ್ವ, ಹೆಚ್ಚುತ್ತಿರುವ ಆರ್ಥಿಕತೆ, ಬಹುತ್ವ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ಹೊಂದಿದೆ.

ಇನ್ನೊಂದೆಡೆ ಪಾಕಿಸ್ತಾನ ಮತಾಂಧತೆ ಮತ್ತು ಭಯೋತ್ಪಾದನೆಯಲ್ಲಿ ಮುಳುಗಿದೆ, IMF (ಅಂತರರಾಷ್ಟ್ರೀಯ ಹಣಕಾಸು ನಿಧಿ) ನಿಂದ ಸರಣಿ ಸಾಲಗಾರನಾಗಿದೆ ಎಂದರು.

ಈ ವರ್ಷದ ಮೇ ತಿಂಗಳಲ್ಲಿ, ಐಎಂಎಫ್ ವಿಸ್ತೃತ ನಿಧಿ ಸೌಲಭ್ಯ (ಇಎಫ್‌ಎಫ್) ಅಡಿಯಲ್ಲಿ ಪಾಕಿಸ್ತಾನಕ್ಕೆ ಸುಮಾರು ಒಂದು ಶತಕೋಟಿ ಡಾಲರ್‌ಗಳನ್ನು ವಿತರಿಸಲು ಅನುಮೋದನೆ ನೀಡಿತ್ತು, ಇದರಿಂದಾಗಿ ಈ ಒಪ್ಪಂದದಡಿಯಲ್ಲಿ ಒಟ್ಟು ವಿತರಣೆ ಸುಮಾರು 2.1 ಶತಕೋಟಿ ಯುಎಸ್ ಡಾಲರ್‌ಗಳಿಗೆ ತಲುಪಿತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತಮ್ಮ ಹೇಳಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಮುಂಭಾಗವಾದ ದಿ ರೆಸಿಸ್ಟೆನ್ಸ್ ಫ್ರಂಟ್ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು.

ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ನೆರೆಹೊರೆಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಮನೋಭಾವವನ್ನು ಉಲ್ಲಂಘಿಸುವ ದೇಶಗಳಿಗೆ ಗಂಭೀರ ಶಿಕ್ಷೆ ವಿಧಿಸಬೇಕು ಎಂದು ಹರೀಶ್ ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT