ಈ ಚಿತ್ರವು ಜುಲೈ 30, 2025 ರ ಬುಧವಾರದಂದು ರಷ್ಯಾದ ಕುರಿಲ್ ದ್ವೀಪಗಳ ಪರಮುಶಿರ್ ದ್ವೀಪದಲ್ಲಿರುವ ಸೆವೆರೊ-ಕುರಿಲ್ಸ್ಕ್ ಕರಾವಳಿ ಪ್ರದೇಶವನ್ನು ಅಪ್ಪಳಿಸಿದ ಸುನಾಮಿಯ ಪರಿಣಾಮವನ್ನು ತೋರಿಸುತ್ತದೆ. Photo | AP
ವಿದೇಶ

ರಷ್ಯಾದ ಕಮ್ಚಟ್ಕಾ ದ್ವೀಪದ ಬಳಿ 8.0 ತೀವ್ರತೆಯ ಭೂಕಂಪನ: ಜಪಾನ್‌ನ ಪೆಸಿಫಿಕ್ ಕರಾವಳಿಗೆ ಸುನಾಮಿ ಎಚ್ಚರಿಕೆ; ಅಮೆರಿಕದಲ್ಲಿ ಕಟ್ಟೆಚ್ಚರ

ಅಮೆರಿಕ, ಜಪಾನ್ ಸೇರಿದಂತೆ ಸಮೀಪದ ಇತರ ದೇಶಗಳಿಗೆ ಪೆಸಿಫಿಕ್ ಮಹಾಸಾಗರದ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಪರಿಣಾಮವಾಗಿ ಹಲವು ಜನರನ್ನು ಸ್ಥಳಾಂತರಿಸಲಾಗಿದ್ದು,

ಟೋಕಿಯೋ: ರಷ್ಯಾದ ಪೂರ್ವ ಭಾಗದ ಕಮ್ಚಟ್ಕಾ ದ್ವೀಪದಲ್ಲಿ ಬುಧವಾರ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸಮುದ್ರದಲ್ಲಿ 4 ಮೀಟರ್ (13 ಅಡಿ) ಎತ್ತರದ ಅಲೆಗಳೊಂದಿಗೆ ಸುನಾಮಿ ಎದ್ದಿದೆ.

ಅಮೆರಿಕ, ಜಪಾನ್ ಸೇರಿದಂತೆ ಸಮೀಪದ ಇತರ ದೇಶಗಳಿಗೆ ಪೆಸಿಫಿಕ್ ಮಹಾಸಾಗರದ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಪರಿಣಾಮವಾಗಿ ಹಲವು ಜನರನ್ನು ಸ್ಥಳಾಂತರಿಸಲಾಗಿದ್ದು, ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಸುನಾಮಿ ಎದ್ದಿರುವ ಬೆನ್ನಲ್ಲೇ ಅಮೆರಿಕ, ಜಪಾನ್ ಮತ್ತು ಹತ್ತಿರದ ಇತರ ದೇಶಗಳಿಗೆ ಪೆಸಿಫಿಕ್ ಮಹಾಸಾಗರದ ಸುನಾಮಿ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪವು 19.3 ಕಿಲೋಮೀಟರ್ (12 ಮೈಲುಗಳು) ಆಳದಲ್ಲಿ ಸಂಭವಿಸಿದೆ. ಇದು ಅವಾಚಾ ಕೊಲ್ಲಿಯಲ್ಲಿರುವ ಸುಮಾರು 1,65,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಸುಮಾರು 125 ಕಿಲೋಮೀಟರ್ (80 ಮೈಲುಗಳು) ಪೂರ್ವ-ಆಗ್ನೇಯದಲ್ಲಿದೆ. ಇದು ಭೂಕಂಪನದ ಕೇಂದ್ರ ಬಿಂದುವಾಗಿದ್ದು, 8.0 ರಿಂದ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.

ಭೂಕಂಪದ ನಂತರ, ಕಮ್ಚಟ್ಕಾ ಪ್ರದೇಶದ ಕೆಲವು ಭಾಗಗಳಲ್ಲಿ 3 ರಿಂದ 4 ಮೀಟರ್ ಎತ್ತರದ ಅಲೆಗಳ ಸುನಾಮಿ ದಾಖಲಾಗಿದೆ ಎಂದು ರಷ್ಯಾದ ತುರ್ತು ಪರಿಸ್ಥಿತಿಗಳ ಪ್ರಾದೇಶಿಕ ಸಚಿವರು ತಿಳಿಸಿದ್ದಾರೆ. ಜನರು ಕರಾವಳಿಯಿಂದ ದೂರ ಹೋಗಬೇಕೆಂದು ಸಲಹೆ ನೀಡಲಾಗಿದೆ. ಕಮ್ಚಟ್ಕಾ ಪ್ರದೇಶದ ರಾಜಧಾನಿಯಲ್ಲಿ ವಿದ್ಯುತ್ ಕಡಿತ ಮತ್ತು ಮೊಬೈಲ್ ಫೋನ್ ಸೇವಾ ವೈಫಲ್ಯ ಕಡಿತವಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಮಾಹಿತಿ ಸಂಗ್ರಹಣೆ ಮತ್ತು ಪ್ರತಿಕ್ರಿಯೆಗಾಗಿ ಜಪಾನ್ ಸರ್ಕಾರವು ಒಂದು ಕಾರ್ಯಪಡೆಯನ್ನು ಸ್ಥಾಪಿಸಿದೆ ಎಂದು ಹೇಳಿದೆ.

ಮುಂದಿನ ಮೂರು ಗಂಟೆಗಳಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಏಳಬಹುದೆಂದು ಅಮೆರಿಕದ ಸುನಾಮಿ ಎಚ್ಚರಿಕೆ ವ್ಯವಸ್ಥೆಯು ಮುನ್ಸೂಚನೆ ನೀಡಿದೆ. ವಾಯುವ್ಯ ಹವಾಯಿಯನ್ ದ್ವೀಪಗಳು ಮತ್ತು ರಷ್ಯಾದ ಕರಾವಳಿಯಲ್ಲಿ ಉಬ್ಬರವಿಳಿತದ ಮಟ್ಟಕ್ಕಿಂತ 3 ಮೀಟರ್ ಎತ್ತರದ(10 ಅಡಿ) ಅಲೆಗಳು ಏಳಬಹುದು ಎಂದು ಅಂದಾಜಿಸಲಾಗಿದೆ.

ಇದಲ್ಲದೆ, ಉಬ್ಬರವಿಳಿತದ ಮಟ್ಟಕ್ಕಿಂತ 0.3 ರಿಂದ 1 ಮೀಟರ್ (1 ರಿಂದ 3.3 ಅಡಿ) ವರೆಗಿನ ಸುನಾಮಿ ಅಲೆಗಳು ಚುಕ್, ಕೊಸ್ರೇ, ಮಾರ್ಷಲ್ ದ್ವೀಪಗಳು, ಪಲಾವ್, ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ ಏಳಬಹುದು ಎಂದು ಸಂಸ್ಥೆ ವರದಿ ಮಾಡಿದೆ. ಏತನ್ಮಧ್ಯೆ, ದಕ್ಷಿಣ ಕೊರಿಯಾ, ಉತ್ತರ ಕೊರಿಯಾ ಮತ್ತು ತೈವಾನ್ ಕರಾವಳಿಯಲ್ಲಿ ಸಣ್ಣ ಸುನಾಮಿ ಅಲೆಗಳನ್ನು ನಿರೀಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಮೆರಿಕದ ಅಲಾಸ್ಕಾದಲ್ಲಿರುವ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರವು, ಅಲಾಸ್ಕಾ ಅಲ್ಯೂಟಿಯನ್ ದ್ವೀಪಗಳ ಕೆಲವು ಭಾಗಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಕ್ಯಾಲಿಫೋರ್ನಿಯಾ, ಒರೆಗಾನ್ ಮತ್ತು ವಾಷಿಂಗ್ಟನ್ ಹಾಗೂ ಹವಾಯಿ ಸೇರಿದಂತೆ ಪಶ್ಚಿಮ ಕರಾವಳಿಯ ಕೆಲವು ಭಾಗಗಳ ಮೇಲೆ ನಿಗಾ ವಹಿಸಿದೆ.

ಇಂದಿನ ಭೂಕಂಪವು ಗಂಭೀರವಾಗಿದ್ದು, ದಶಕಗಳ ಭೂಕಂಪಗಳಲ್ಲಿ ಅತ್ಯಂತ ಪ್ರಬಲವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಭೂಕಂಪದಿಂದ ಇಲ್ಲಿಯವರೆಗೆ ಯಾವುದೇ ಗಾಯಗಳು ಸಂಭವಿಸಿಲ್ಲ. ಆದಾಗ್ಯೂ, ಪೀಡಿತ ಪ್ರದೇಶದಲ್ಲಿ ಒಂದು ಶಿಶುವಿಹಾರಕ್ಕೆ ಹಾನಿಯಾಗಿದೆ ಎಂದು ಕಮ್ಚಟ್ಕಾ ಗವರ್ನರ್ ವ್ಲಾಡಿಮಿರ್ ಸೊಲೊಡೊವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್‌; ನ್ಯೂಯಾರ್ಕ್ ಟೈಮ್ಸ್ ವರದಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ರಾಜ್ಯದ ಜನತೆಗ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ

SCROLL FOR NEXT