ಇಸ್ರೇಲ್ ಸಾಂದರ್ಭಿಕ ಚಿತ್ರ 
ವಿದೇಶ

ಇರಾನ್ ಮೇಲೆ ಭಾರಿ ದಾಳಿ: ವಿಶ್ವದಾದ್ಯಂತ ರಾಯಭಾರ ಕಚೇರಿ ಮುಚ್ಚಿದ ಇಸ್ರೇಲ್; ಯಹೂದಿ ಲಾಂಛನ ಪ್ರದರ್ಶಿಸದಂತೆ ಸೂಚನೆ!

ಇಸ್ರೇಲ್ ರಾಯಭಾರಿ ಕಚೇರಿಯ ಯಾವುದೇ ಸೇವೆಗಳು ಇರುವುದಿಲ್ಲ. ಯಾವುದೇ ದಾಳಿ ಎದುರಾದರೂ ನಾಗರಿಕರು ಸ್ಥಳೀಯ ಭದ್ರತಾ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಎಚ್ಚರಿಕೆಯ ಸಂದೇಶ.

ಜೆರುಸೆಲೆಂ: ಇರಾನ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿದ ನಂತರ ವಿಶ್ವದಾದ್ಯಂತ ಇರುವ ತನ್ನ ಎಲ್ಲಾ ರಾಯಭಾರ ಕಚೇರಿಗಳನ್ನು ಇಸ್ರೇಲ್ ಮುಚ್ಚುತ್ತಿದೆ.

ಜಗತ್ತಿನ ವಿವಿಧ ರಾಷ್ಟ್ರಗಳು ತನ್ನ ನಾಗರಿಕರು ಜಾಗರೂಕರಾಗಿರಬೇಕು, ಯಹೂದಿ ಅಥವಾ ಇಸ್ರೇಲ್ ನ ಯಾವುದೇ ಲಾಂಛವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬಾರದು ಎಂದು ರಾಯಬಾರ ಕಚೇರಿಯ ವೆಬ್ ಸೈಟ್ ಗಳಲ್ಲಿ ಶುಕ್ರವಾರ ಹೇಳಲಾಗಿದೆ.

ಇಸ್ರೇಲ್ ರಾಯಭಾರಿ ಕಚೇರಿಯ ಯಾವುದೇ ಸೇವೆಗಳು ಇರುವುದಿಲ್ಲ. ಯಾವುದೇ ದಾಳಿ ಎದುರಾದರೂ ನಾಗರಿಕರು ಸ್ಥಳೀಯ ಭದ್ರತಾ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಎಚ್ಚರಿಕೆಯ ಸಂದೇಶದಲ್ಲಿ ತಿಳಿಸಲಾಗಿದೆ.

ರಾಯಭಾರ ಕಚೇರಿ ಎಷ್ಟು ದಿನಗಳ ಕಾಲ ಮುಚ್ಚಿರಲಿದೆ ಎಂಬ ಯಾವುದೇ ಮಾಹಿತಿಯನ್ನು ಇಸ್ರೇಲ್ ನೀಡಿಲ್ಲ. ಬರ್ಲಿನ್ ನ ರಾಯಭಾರ ಕಚೇರಿಯ ಸಿಬ್ಬಂದಿಯೊಬ್ಬರು ಕರೆ ಸ್ವೀಕರಿಸಿದರಾದರೂ ಅವರು ಹೆಚ್ಚಿನ ಮಾಹಿತಿ ನೀಡಲಿಲ್ಲ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಇಸ್ರೇಲಿ ರಾಯಭಾರ ಕಚೇರಿಗಳನ್ನು ಮುಚ್ಚಲಾಗುವುದು ಮತ್ತು ರಾಯಭಾರ ಕಚೇರಿ ಸೇವೆಗಳು ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜರ್ಮನಿ ಚಾನ್ಸಲರ್ ಫ್ರೆಡ್ರಿಕ್ ಮರ್ಜ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ತನ್ನ ದೇಶದಲ್ಲಿರುವ ಯಹೂದಿ ಮತ್ತು ಇಸ್ರೇಲ್ ತಾಣಗಳಿಗೆ ಹೆಚ್ಚಿನ ಭದ್ರತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇರಾನ್ ನ ಅಣುಶಕ್ತಿ ಕೇಂದ್ರಗಳು ಮತ್ತು ಕ್ಷೀಪಣಿ ಕಾರ್ಖಾನೆ ಮೇಲೆ ದಾಳಿ ನಡೆಸಲಾಗಿದೆ. ಅಣು ಬಾಂಬ್ ಉತ್ಪಾದಿಸಲು ಮುಂದಾಗಿರುವ ಇರಾನ್ ಯತ್ನವನ್ನು ತಡೆಯಲು ಈ ಸೇನಾ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಇಸ್ರೇಲ್ ಹೇಳಿದೆ.

ಅಮೆರಿಕದ ಮಾತುಕತೆಗೆ ಸೊಪ್ಪ ಹಾಕದ ಇರಾನ್ ದಾಳಿಯನ್ನು ತಾನೇ ಆಹ್ವಾನಿಸಿಕೊಂಡಿದೆ. ಮುಂದಿನ ದಾಳಿ ಮತ್ತಷ್ಟು ಘೋರವಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ; ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ; ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ! Video