ಇರಾನ್ ಮೇಲೆ ಇಸ್ರೇಲಿ ದಾಳಿಯಲ್ಲಿ ಮೃತಪಟ್ಟವರ ಚಿತ್ರಗಳನ್ನು ಇರಾನ್‌ನ ಟೆಹ್ರಾನ್‌ನಲ್ಲಿರುವ ಬೀದಿಯಲ್ಲಿ ಪ್ರದರ್ಶಿಸಲಾಗಿದೆ. 
ವಿದೇಶ

ಟೆಹ್ರಾನ್ ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ಸಂಪರ್ಕಿಸುವಂತೆ ಸೂಚನೆ: ದೆಹಲಿಯಲ್ಲಿ ನಿಯಂತ್ರಣ ಕೊಠಡಿ, ತುರ್ತು ಸಹಾಯವಾಣಿ ಆರಂಭ

ಭಾರತೀಯ ರಾಯಭಾರ ಕಚೇರಿ, ಟೆಹ್ರಾನ್‌ನಿಂದ ಹೊರಹೋಗಬಹುದಾದ ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಪಿಐಒಗಳು ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ನಗರದ ಹೊರಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದೆ.

ಇರಾನ್-ಇಸ್ರೇಲ್ ಸಂಘರ್ಷ ಹೆಚ್ಚಳ ಬೆನ್ನಲ್ಲೇ, ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಇಂದು ಮಂಗಳವಾರ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ನೀಡುವಂತೆ ಕೋರಲಾಗಿದೆ. ಇಸ್ರೇಲ್-ಇರಾನ್ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲಿ ಪಡೆಗಳು ಮಧ್ಯ ಟೆಹ್ರಾನ್ ನಿವಾಸಿಗಳಿಗೆ ಸ್ಥಳ ತೊರೆದು ಸುರಕ್ಷಿತ ಪ್ರದೇಶಕ್ಕೆ ಹೋಗುವಂತೆ ಎಚ್ಚರಿಕೆ ನೀಡಿದ್ದಾರೆ.

ಟೆಹ್ರಾನ್‌ನಲ್ಲಿರುವ ಮತ್ತು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರದ ಎಲ್ಲಾ ಭಾರತೀಯ ಪ್ರಜೆಗಳು ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು ತಕ್ಷಣವೇ ಸಂಪರ್ಕಿಸಿ ಅವರ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ಒದಗಿಸಬೇಕು. ಸಂಪರ್ಕ ಸಂಖ್ಯೆ: +989010144557; +989128109115; +989128109109," ಎಂದು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಭಾರತೀಯ ರಾಯಭಾರ ಕಚೇರಿ, ಟೆಹ್ರಾನ್‌ನಿಂದ ಹೊರಹೋಗಬಹುದಾದ ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಪಿಐಒಗಳು ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ನಗರದ ಹೊರಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಡುವ ಮೊದಲು ಟೆಹ್ರಾನ್‌ನ ಜನರಿಗೆ ರಾಜಧಾನಿಯನ್ನು ತೊರೆಯುವಂತೆ ಎಚ್ಚರಿಕೆ ನೀಡಿದರು.

ನಂತರ ಅವರು ಶೃಂಗಸಭೆಯಿಂದ ನಿರ್ಗಮಿಸುವುದಕ್ಕೂ ಇಸ್ರೇಲ್-ಇರಾನ್ ಸಂಘರ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಇರಾನ್ ಮತ್ತು ಇಸ್ರೇಲ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಚಿವಾಲಯದಲ್ಲಿ 24x7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ದೆಹಲಿಯಲ್ಲಿ ತಿಳಿಸಿದೆ.

"ನಿಯಂತ್ರಣ ಕೊಠಡಿಯ ಸಂಪರ್ಕ ವಿವರಗಳು ಈ ಕೆಳಗಿನಂತಿವೆ: 1800118797 (ಟೋಲ್-ಫ್ರೀ), +91-11-23012113, +91-11-23014104, +91-11-23017905 +91-9968291988 (ವಾಟ್ಸಾಪ್) ಮತ್ತು situationroom@mea.gov.in," ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು 24x7 ತುರ್ತು ಸಹಾಯವಾಣಿಯನ್ನು ಸ್ಥಾಪಿಸಿದೆ. "ಕರೆ ಮಾಡಲು ಮಾತ್ರ: +98 9128109115, +98 9128109109; WhatsApp ಗಾಗಿ: +98 901044557, +98 9015993320, +91 8086871709, ಬಂದರ್ ಅಬ್ಬಾಸ್: +98 9177699036, ಜಹೇದನ್: +98 9396356649" ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT