ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ. 
ವಿದೇಶ

ಸುಪ್ರೀಂ ಲೀಡರ್ ಎಲ್ಲಿ ಅಡಗಿದ್ದಾನೆಂಬುದು ಗೊತ್ತಿದೆ, ಈಗ ಹತ್ಯೆ ಮಾಡಲ್ಲ: ಟ್ರಂಪ್ ಎಚ್ಚರಿಕೆ; ಯುದ್ಧ ಆರಂಭ ಎಂದ ಖಮೇನಿ!

ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಎಲ್ಲಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಆದರೆ, ಆತನನ್ನು ನಾವು ಹತ್ಯೆ ಮಾಡಲ್ಲ.

ವಾಷಿಂಗ್ಟನ್‌: ಇಸ್ರೇಲ್‌-ಇರಾನ್‌ ನಡುವಿನ ಯುದ್ಧಕ್ಕೆ ಅಮೆರಿಕ ಅಧಿಕೃತ ಎಂಟ್ರಿಕೊಟ್ಟಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕೆಂದು ಎಚ್ಚರಿಕೆ ನೀಡಿದೆ.

ಜಿ7 ದೇಶಗಳ ಶೃಂಗಸಭೆ ವೇಳೆ ಅರ್ಧಕ್ಕೇ ಹೊರ ಬಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿ, ಖಮೇನಿ ಶರಣಾಗುವಂತೆ ಸೂಚಿಸಿದ್ದಾರೆ.

ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಎಲ್ಲಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಆದರೆ, ಆತನನ್ನು ನಾವು ಹತ್ಯೆ ಮಾಡಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ ಎಂದು ಹೇಳಿದ್ದಾರೆ.

ಇರಾನ್‌ ಪ್ರತೀಕಾರದ ಭಯದಿಂದ ಅಮೆರಿಕದ ನಾಗರಿಕರು ಮತ್ತು ಸೇನಾ ಪಡೆಗಳ ಮೇಲೆ ದಾಳಿ ಮಾಡದಿರುವ ನಿರ್ಧಾರ ಕೈಗೊಂಡಿದೆ. ಇದು ಇರಾನ್‌ ಅಸ್ತಿತ್ವಕ್ಕಾಗಿ ಕೈಗೊಂಡ ಅನಿವಾರ್ಯ ನಿರ್ಧಾರ. ಆದರೆ, ನಮ್ಮ ತಾಳ್ಮೆ ಕ್ಷೀಣಿಸುತ್ತಿದ್ದು, ಇರಾನ್‌ ಈ ಕೂಡಲೇ ಭೇಷರತ್‌ ಶರಣಾಗತಿಗೆ ಒಪಿಕೊಳ್ಳಬೇಕು.

ಇರಾನ್‌ ಶರಣಾಗತಿ ಘೋಷಿಸಿ ಪರಮಾಣು ಒಪ್ಪಂದ ಮಾತುಕತೆಗೆ ಮುಂದಾಗಬೇಕು ಎಂಬುದು ನಮ್ಮ ಬಯಕೆಯಾಗಿದೆ. ಈ ಗುರಿಯನ್ನು ಸಾಧಿಸಲು ನಾವು ಜಂಟಿ ಪ್ರಯತ್ನಗಳನ್ನು ಮುಂದುವರೆಸುತ್ತೇವೆ. ಇರಾನ್‌ ಇಷ್ಟೊತ್ತಿಗೆ ಪರಮಾಣು ಒಪ್ಪಂದ ಮಾತುಕತೆಗೆ ಸಿದ್ಧವಾಗಬೇಕಿತ್ತು. ನಾನು ಹಲವಾರು ಬಾರಿ ಈ ಕುರಿತು ಇರಾನ್‌ ಉನ್ನತ ರಾಜಕೀಯ ನಾಯಕತ್ವಕ್ಕೆ ಮನವಿ ಮಾಡಿದ್ದೇನೆ. ಆದರೆ, ಆಗೆಲ್ಲಾ ಏರು ಧ್ವನಿಯಲ್ಲಿ ಗುಡುಗುತ್ತಿದ್ದ ಇರಾನ್‌ ನಾಯಕರು, ಈಗ ಆತ್ಮರಕ್ಷಣೆಗಾಗಿ ಬಂಕರ್‌ನಲ್ಲಿ ಅಡಗಿ ಕುಳಿತಿದ್ದಾರೆ. ನಮ್ಮ ತಾಳ್ಮೆ ಕ್ಷೀಣಿಸುತ್ತಿದ್ದು, ಇರಾನ್‌ ಬೇಷರತ್‌ ಆಗಿ ಶರಣಾಗಿ ಮಾತುಕತೆ ಮೇಜಿನ ಮೇಲೆ ಬರಬೇಕು.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುತ್ತಿಲ್ಲ ಎಂಬುದನ್ನು ಕಣ್ಣು ಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇರಾನ್‌ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರವಾಗುವುದಕ್ಕೆ ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಈ ನಡುವೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಯುದ್ಧ ಆರಂಭ ಎಂದು ಹೇಳಿದ್ದಾರೆ. ಈ ಮೂಲಕ ಟ್ರಂಪ್ ಅವರ ಎಚ್ಚರಿಕೆಯನ್ನು ತಿರಸ್ಕರಿಸುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!